ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿರಿಯ ಚಿಂತಕ ದಿ. ಜಿ ರಾಜಶೇಖರ್ ಸ್ಮಾರಕ ಜ್ಞಾನ ವೇತನಕ್ಕೆ ಅರ್ಜಿ ಆಹ್ವಾನ; ಆಸಕ್ತರು ಈ ಮಾಹಿತಿ ಅನುಸರಿಸಿ

P

Peepal Media Desk • ಅಂಕಣ, ವಿಶೇಷ

• 1 ನಿಮಿಷದ ಓದು

ಹಿರಿಯ ಚಿಂತಕ ದಿ. ಜಿ ರಾಜಶೇಖರ್ ಸ್ಮಾರಕ ಜ್ಞಾನ ವೇತನಕ್ಕೆ ಅರ್ಜಿ ಆಹ್ವಾನ; ಆಸಕ್ತರು ಈ ಮಾಹಿತಿ ಅನುಸರಿಸಿ

ಹಿರಿಯ ಚಿಂತಕ ಹಾಗೂ ಸಾಮಾಜಿಕ ಚಳುವಳಿಗಾರ ಜಿ ರಾಜಶೇಖರ್ ನಿಧನರಾಗಿ ಎರಡು ವರ್ಷ ಕಳೆದಿವೆ. ಅವರ ಹುಟ್ಟಿದ ದಿನವಾದ ಸೆಪ್ಟೆಂಬರ್ 16 ರ ದಿನವನ್ನು ಅವರ ಅಚ್ಚಳಿಯದ ಚಿಂತನಾಶೀಲ ಕಾರ್ಯಚಟುವಟಿಕೆಗಳಿಗೆ ಸೂಕ್ತ ಗೌರವ ಸಲ್ಲಿಸುವ ಅವಕಾಶವೆಂದು ಅವರ ಆಪ್ತ ವಲಯ ಭಾವಿಸಿ ಅವರ ಹೆಸರಿನಲ್ಲಿ ಜಿ.ರಾಜಶೇಖರ್ ಸ್ಮಾರಕ ಜ್ಞಾನ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಜ್ಞಾನವೇತನವು, ಕಾಲದ ಗುಣಗ್ರಾಹಿಯಾದ ‘ಕಾಗೋಡು ಸತ್ಯಾಗ್ರಹ’ ದಂತಹ ಕೃತಿಗಳನ್ನು ಕಟ್ಟಲು ಕನ್ನಡದ ಯುವ ಬರಹಗಾರರು, ಸಂಶೋಧಕರು ಹಾಗು ಪತ್ರಕರ್ತರಿಗೆ ಸ್ಪೂರ್ತಿದಾಯಕವಾಗಲಿ ಎಂಬ ಮಹದುದ್ದೇಶ ಹೊಂದಿದೆ.

ಆ ಮೂಲಕ ಜ್ಞಾನ ವೇತನವು ಆಸಕ್ತರಿಗೆ ಮಾರ್ಗದರ್ಶನವಾಗಲೆಂದು ಜಿ.ರಾಜಶೇಖರ್ ಸ್ಮಾರಕ ಅಗತ್ಯ ಮಾಹಿತಿ ತಿಳಿಸಿದೆ.

ಜ್ಞಾನ ವೇತನ ವಿವರಗಳು:
1) ಒಟ್ಟು 1,00,000 ರೂಪಾಯಿ ಮೊತ್ತದ ಜ್ಞಾನವೇತನವನ್ನು, 18-35 ರ ವಯಸ್ಸಿನ ಮಿತಿಯಲ್ಲಿ ಇರುವ ಒಬ್ಬ ಅಭ್ಯರ್ಥಿಗೆ ನಾಲ್ಕು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ವಿತರಿಸಲಾಗುವುದು.
2) ವೇತನ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸಂಶೋಧನೆಯ ವಿಷಯ ಹಾಗು ಸಂಶೋಧನಾ ವಿಧಾನವನ್ನು ಒಳಗೊಂಡ ಸಂಶೋಧನಾ ಪ್ರಸ್ತಾವನೆ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನಾಂಕ.
3) ಶೈಕ್ಷಣಿಕ ಕ್ಷೇತ್ರದಲ್ಲಿ ನುರಿತರಾಗಿರುವವರು, ಅನುಭವಿ ಲೇಖಕರನ್ನು ಒಳಗೊಂಡ ಸಲಹಾ ಮಂಡಳಿಯು ಒಬ್ಬ ಅಭ್ಯರ್ಥಿಯನ್ನು ವೇತನಕ್ಕೆ ಆಯ್ಕೆ ಮಾಡುತ್ತದೆ.
4) ಆಯ್ಕೆಯಾದ ಅಭ್ಯರ್ಥಿಯು ಸಂಶೋಧನೆಗೆ ಆಯ್ದುಕೊಂಡ ಚಾರಿತ್ರಿಕ ವಿಷಯದ ಮೇಲೆ, ಸಾಕ್ಷಿ-ಪುರಾವೆ ಹಾಗು ಆಳ-ಅಗಲ (narrative journalism) ಉಳ್ಳ ವರದಿಗಳ ಆಧಾರದಲ್ಲಿ ಸಂಶೋಧನೆ ನಡೆಸಬೇಕು. ಸಲಹಾ ಮಂಡಳಿಯು ಸಂಶೋಧನಾ ಕಾರ್ಯದಲ್ಲಿ ಮಾರ್ಗದರ್ಶನ ನೀಡುತ್ತದೆ.
5) ಮಹಿಳೆ, ಕಡೆಗಣಿತ ಜಾತಿ ಪಗಂಡ ಹಾಗು ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ಯವಿರುತ್ತದೆ.
6) ಸೂಚಿತ ಸಂಶೋಧನಾ ವಲಯಗಳು:
– ಮತೀಯ ದ್ವೇಷ/ ಕೂಡುಕಟ್ಟು/ ಸಹಬಾಳ್ವೆ – ಇವುಗಳ ಸಾಮಾಜಿಕ- ಸಾಂಸ್ಕತಿಕ ಬೇರುಗಳು; ಇಂದಿನ ವಾಸ್ತವಿಕ ಸ್ಥಿತಿಗತಿ- ಸ್ಥಳ-ವಿದ್ಯಮಾನ ಅಧ್ಯಯನ
– ಜಾತಿ ಯಜಮಾನಿಕೆ, ಅಸಮಾನತೆ, ಅನ್ಯಾಯಗಳ ಮುಂದುವರಿಕೆಯ ಸಾಮಾಜಿಕ-ರಾಜಕೀಯ ಕಾರಣಗಳು- ಸ್ಥಳ-ವಿದ್ಯಮಾನ ಅಧ್ಯಯನ
– ಕಡೆಗಣಿತ ಸಮುದಾಯಗಳ ( ಸ್ಥಳ, ಸಮುದಾಯ ನಿರ್ದಿಷ್ಟತೆ ಇರಬೇಕು) ಪ್ರತಿರೋಧ ಚರಿತ್ರೆ ಮತ್ತೂ ಪ್ರಸ್ತುತ ಪರಿಸ್ಥಿತಿಯ ನೈಜತೆ
– ಆಧುನಿಕ ಸಾಂಸ್ಥಿಕ ವ್ಯವಸ್ಥೆಗಳ ( ಕಾನೂನು, ನ್ಯಾಯಿಕ, ಆರೋಗ್ಯ, ಶಿಕ್ಷಣ, ಮಹಿಳೆ- ಮಕ್ಕಳ ಕಲ್ಯಾಣ ಇತ್ಯಾದಿ) ವೈಫಲ್ಯದ ಕಾರ್ಯ-ಕಾರಣ -ಪರಿಣಾಮ
– ಶ್ರಮಿಕರ ಆಂತರಿಕ ವಲಸೆ: ಸಾಮಾಜಿಕ ಕಾರ್ಯ-ಕಾರಣ, ವಲಸೆಯ ನಕ್ಷೆ, ಪ್ರದೇಶ ಭಿನ್ನತೆ, ಹೊರಗಿಡುವಿಕೆ, ಕಡೆಗಣಿಸುವಿಕೆ, ಸಾಮಾಜಿಕ ಪರಿಣಾಮಗಳು.
– ಕಡೆಗಣಿತ ಸಮುದಾಯಗಳ ಕಲ್ಯಾಣಕ್ಕಾಗಿ ವಿಜ್ಞಾನ ತಂತ್ರಜ್ಞಾನ- ವರ್ತಮಾನದ ಸ್ಥಿತಿ ಗತಿ, ಎದುರಿಸ ಬೇಕಾದ ಸವಾಲುಗಳು, ಸಾಗಬೇಕಾದ ಹಾದಿ.
– ಜೀವಸಂಕುಲ, ಪರಿಸರ ಮತ್ತು ಮಾನವ ಅಸ್ತಿತ್ವದ ಸಮಸ್ಯೆಗಳು
ಈ ಸೂಚಿತ ವಿಷಯಗಳಲ್ಲದೆ ಸಂಶೋಧನೆಗೆ ಅರ್ಹವಾದ ಸಾಮಾಜಿಕ ಕಾಳಜಿಯ/ ಕುತೂಹಲಕರ ವಸ್ತುಗಳಿಗೂ ಅವಕಾಶವಿದೆ
ಸಲಹಾ ಸಮಿತಿಯ ಆಯ್ಕೆಯೇ ಅಂತಿಮ

  1. ಪ್ರಸ್ತಾವನೆ ಕಳುಹಿಸಲು ವಿಳಾಸ:grskksv@gmail.com. Enquiry : 7838263911
P

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version