ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗ್ರಂಥಾಲಯಕ್ಕೆ ಪುಸ್ತಕ ಖರೀದಿಯಲ್ಲಿ ಅವ್ಯವಹಾರ ; ಕುಲಪತಿಗಳ ಆರೋಪಕ್ಕೆ ಸರ್ಕಾರದ ಪ್ರತಿಕ್ರಿಯೆ ಏನು?

PPeepal Media Desk

Peepal Media Desk ವಿಶೇಷ

• 1 ನಿಮಿಷದ ಓದು

ಗ್ರಂಥಾಲಯಕ್ಕೆ ಪುಸ್ತಕ ಖರೀದಿಯಲ್ಲಿ ಅವ್ಯವಹಾರ ; ಕುಲಪತಿಗಳ ಆರೋಪಕ್ಕೆ ಸರ್ಕಾರದ ಪ್ರತಿಕ್ರಿಯೆ ಏನು?

2022-23 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ನಿಧಿಯಲ್ಲಿ ಪುಸ್ತಕಗಳ ಖರೀದಿ ಕುರಿತಂತೆ ಭ್ರಷ್ಟಾಚಾರ ನಡೆದಿದೆ ಎಂದು ‘ದಿ ಫೈಲ್’ ವರದಿ ಮಾಡಿದೆ. ‘ದಿ ಫೈಲ್’ ವರದಿಯಂತೆ, ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಕೆಟಿಪಿಪಿ ಕಾಯ್ದೆ ನಿಯಮಗಳ ಪಾಲನೆಯಾಗಿಲ್ಲ ಮತ್ತು ದರಪಟ್ಟಿಗಳನ್ನೂ ಪಡೆದಿಲ್ಲ. ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪುಸ್ತಕಗಳ ಖರೀದಿ ಮತ್ತು ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಾದೇಶವನ್ನೂ ಹೊರಡಿಸಿಲ್ಲ ಎಂದು ಆರೋಪಿಸಲಾಗಿದೆ. 

ಈ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಘಟಕದದ ಸ್ಥಾಯಿ ಸಮಿತಿಯು ಪುಸ್ತಕಗಳ ಖರೀದಿ ಕುರಿತು ಪ್ರಸ್ತಾವನೆ ಮಂಡಿಸಿತ್ತು. ಅದಕ್ಕೆಂದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ನಿಧಿಯಡಿಯಲ್ಲಿ 5 ಲಕ್ಷ ರು ಗಳ ಅನುದಾನವನ್ನು ಆಯವ್ಯಯದಲ್ಲಿ ಒದಗಿಸಲಾಗಿತ್ತು. ಆದರೆ ಈ ಕುರಿತು ಕಾನೂನು ವಿಶ್ವವಿದ್ಯಾಲಯದ ಕುಲಸಚಿವರಾದ ಅನುರಾಧ ವಸ್ತ್ರದ ಅವರು ಕುಲಪತಿಗಳ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಕ್ರಮವಾಗಿಲ್ಲ ಎಂದು ವರದಿಯಾಗಿದೆ.

ಈ ಎಲ್ಲಾ ಬೆಳವಣಿಗೆಗಳಿಂದ ಕುಲಸಚಿವರಾದ ಅನುರಾಧ ವಸ್ತ್ರದ್ ಅವರು ನೇರವಾಗಿ ಸರ್ಕಾರದ ಮೆಟ್ಟಿಲು ಹತ್ತಿದ್ದಾರೆ. ಪ್ರಕರಣದ ಕುರಿತು ವಿಶ್ವವಿದ್ಯಾಲಯದ ಕುಲಸಚಿವರಾದ ಕೆಎಎಸ್ ಅಧಿಕಾರಿ ಅನುರಾಧ ವಸ್ತ್ರದ ಅವರು ಸರ್ಕಾರಕ್ಕೆ 2024ರ ಫೆ.9ರಂದೇ ಪತ್ರ ಬರೆದಿರುವ ಅಂಶ ಇದೀಗ ಬೆಳಕಿಗೆ ಬಂದಿದೆ.

ಕುಲಪತಿಗಳ ಕಾರ್ಯಾಲಯದ ವಿಶೇಷಾಧಿಕಾರಿಯಾದ ಐ ಬಿ ಬಿರಾದಾರ ಅವರ ಮೌಖಿಕ ಆದೇಶದ ಮೂಲಕವೇ ಗ್ರಂಥಾಲಯಕ್ಕೆ ಪುಸ್ತಕಗಳ ಖರೀದಿಯಾಗಿತ್ತು. ಪುಸ್ತಕಗಳ ಖರೀದಿ ಸಂಬಂಧದ ಕಡತವನ್ನು ವಿಶ್ವವಿದ್ಯಾಲಯದ ಗ್ರಂಥಾಲಯ ಇಲಾಖೆಗೆ ಹಸ್ತಾಂತರಿಸದೇ ತಮ್ಮ ಬಳಿಯೇ ಇರಿಸಿಕೊಂಡಿದ್ದರು ಎಂದು ಕುಲಸಚಿವೆ ಅನುರಾಧ ವಸ್ತ್ರದ ಅವರು ಸರ್ಕಾರಕ್ಕೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಪುಸ್ತಕಗಳ ಸಂಗ್ರಹಣೆಗೆ ದರಪಟ್ಟಿ ಆಹ್ವಾನಿಸಿ ನಿಯಮಾನುಸಾರ ಸೂಕ್ತ ಕ್ರಮವಹಿಸಬೇಕು ಎಂದು 2023ರ ಫೆ.23ರಂದು ಕುಲಪತಿಗಳು ಸೂಚಿಸಿದ್ದರು. ಅಲ್ಲದೇ 2023ರ ಮಾರ್ಚ್ 16ರಂದು ಅನುಮೋದಿಸಿದ್ದರು. ಆದರೂ ಕಡತವನ್ನು ಕುಲಪತಿಗಳ ವಿಶೇಷಾಧಿಕಾರಿಗಳಾದ ಐ ಬಿ ಬಿರಾದಾರ ಅವರನ್ನು ಕಡತವನ್ನು ಮೂಲ ಶಾಖೆ ಗ್ರಂಥಾಲಯಕ್ಕೆ ವರ್ಗಾಯಿಸಿರಲಿಲ್ಲ ಎಂದು ಕುಲಸಚಿವರು ಪತ್ರದಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ.

ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಯಾವುದೇ ಪ್ರಕಟಣೆ ನೀಡಿರಲಿಲ್ಲ. ಮತ್ತು ತುಲನಾತ್ಮಕ ಪಟ್ಟಿ ತಯಾರಿಸಿರಲಿಲ್ಲ. ಹಾಗೂ ಈ ಪಟ್ಟಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯನ್ನೂ ಪಡೆದಿರಲಿಲ್ಲ. ಹಾಗೂ ಯಾವುದೇ ಕಾರ್ಯಾದೇಶ ನೀಡದೇ ತಾವೇ ನೇರವಾಗಿ ದರಪಟ್ಟಿ ಆಹ್ವಾನಿಸಿದ್ದರು. ಈ ಮೂಲಕ ಕೆಟಿಪಿಪಿ ಕಾಯ್ದೆ 1999 ಮತ್ತು ನಿಯಮಗಳು 2000 ಮತ್ತು ಸಂಗ್ರಹಣೆ ಕುರಿತಂತೆ ಆರ್ಥಿಕ ಇಲಾಖೆಯ ಆದೇಶಗಳನ್ನು ಉಲ್ಲಂಘಿಸಿದ್ದಾರೆ ಎಂದು ಕುಲಸಚಿವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಕುಲಪತಿಗಳ ಈ ಪತ್ರದಿಂದ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಸಾಮಾನ್ಯವಾಗಿ ಹಲವಾರು ವರ್ಷಗಳಿಂದ ಗ್ರಂಥಾಲಯದ ಪುಸ್ತಕಗಳಿಗೆ ಸರಾಸರಿ ಶೇ.25ರಿಂದ 30ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಆದರೆ ಬಿರಾದಾರ ಅವರ ಮೌಖಿಕ ಸೂಚನೆ ಮೇರೆಗೆ ಆಗಿರುವ ಈ ಸಂಗ್ರಹಣೆಯಲ್ಲಿ ಕೇವಲ ಶೇ.15ರಷ್ಟು ರಿಯಾಯಿತಿ ಪಡೆದುಕೊಂಡಿದೆ. ಈ ನಿಯಮಬಾಹಿರ ಕ್ರಮದಿಂದ ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟವುಂಟಾಗಿರುವುದು ಕಂಡು ಬಂದಿದೆ ಎಂದೂ ಪತ್ರದಲ್ಲಿ ಪ್ರಸ್ತಾಪಿಸಿರುವುದು ತಿಳಿದು ಬಂದಿದೆ.

PPeepal Media Desk

Peepal Media Desk

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು