ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡ ಮಹಿಳಾ ಕಿರುಚಿತ್ರೋತ್ಸವ: ಸಲ್ಲಿಕೆಗೆ ಕೊನೆಯ ದಿನ  ಏಪ್ರಿಲ್ 30

P

Peepal Media Desk • ವಿಶೇಷ

• 1 ನಿಮಿಷದ ಓದು

ಕನ್ನಡ ಮಹಿಳಾ ಕಿರುಚಿತ್ರೋತ್ಸವ: ಸಲ್ಲಿಕೆಗೆ ಕೊನೆಯ ದಿನ  ಏಪ್ರಿಲ್ 30

ಜೂನ್ 14 ರಂದು ಬೆಂಗಳೂರಿನಲ್ಲಿ ನಡೆಯಲಿರುವ “ಅವಳ ಹೆಜ್ಜೆ ಕಿರುಚಿತ್ರೋತ್ಸವ-2025” ಕ್ಕೆ ಕಿರುಚಿತ್ರವನ್ನು ಸಲ್ಲಿಸಲು ಇನ್ನು ಕೆಲವೇ ದಿನಗಳ ಅವಕಾಶವಿದ್ದು, ಮಹಿಳೆಯರೇ ತಯಾರಿಸಿದ ಕಿರುಚಿತ್ರಗಳ ಸ್ಪರ್ಧೆಯನ್ನು ಮೊಟ್ಟ ಮೊದಲ ಬಾರಿಗೆ ಏರ್ಪಡಿಸಲಾಗಿದೆ.

ಅತ್ಯುತ್ತಮ ಕಿರುಚಿತ್ರಕ್ಕೆ ₹1,00,000 (ಒಂದು ಲಕ್ಷ) ನಗದು ಬಹುಮಾನ ಪಡೆಯುವ ಅವಕಾಶವಿದೆ. ಜೊತೆಗೆ, ಸಾಕ್ಷ್ಯಚಿತ್ರಗಳೂ ಸೇರಿದಂತೆ ಅನೇಕ ವಿಶೇಷ ವರ್ಗಗಳಲ್ಲಿ ತಲಾ ಒಂದು ಚಿತ್ರಕ್ಕೆ ಮೆಚ್ಚುಗೆಯ ಬಹುಮಾನ ನಗದು ₹10,000 (ಹತ್ತು ಸಾವಿರ) ಪಡೆಯುವ ಅವಕಾಶವಿದೆ.

ಏಪ್ರಿಲ್ 30, 2025 ರೊಳಗೆ ಕಿರುಚಿತ್ರದ ಗುಪ್ತ ಲಿಂಕ್ ಮತ್ತು ಪ್ರವೇಶ ಶುಲ್ಕ ₹1000 ಜೊತೆಗೆ ಅರ್ಜಿಯನ್ನು www.avalahejje.net ಮೂಲಕ ಸಲ್ಲಿಸಬೇಕು. ಕೆಲವು ವಿಶೇಷ ಸಂದರ್ಭಗಳಲ್ಲಿ ಪ್ರವೇಶ ಶುಲ್ಕಕ್ಕೆ ವಿನಾಯಿತಿ ಮತ್ತು ಕೆಲವು ದಿನಗಳ ಗಡುವು ವಿಸ್ತರಣೆ ನೀಡಲು ಸಾಧ್ಯವಿದೆಯಾದರೂ ಈ ಬಗ್ಗೆ ಮನವಿಯನ್ನು ವೆಬ್ಸೈಟ್ ಮೂಲಕ ಏಪ್ರಿಲ್ 30 ರೊಳಗೆ ಸಲ್ಲಿಸಿದಲ್ಲಿ ಮಾತ್ರ ಪರಿಗಣಿಸಲಾಗುವುದು. ಪ್ರಶ್ನೆಗಳಿದ್ದಲ್ಲಿ, 8867747236 ಗೆ ವಾಟ್ಸಾಪ್ ಅಥವಾ avalahejjefilms@gmail.com ಗೆ ಈಮೇಲ್ ಮಾಡಿ.

ಕ್ಯಾಮೆರಾದ ಹಿಂದೆ ಮಹಿಳೆ ಇಲ್ಲದಿದ್ದರೆ, ಸಿನಿಮಾ ಪರದೆಯ ಮೇಲಿನ ಮಹಿಳಾ ಪಾತ್ರಗಳು ಕೇವಲ ಗ್ಲಾಮರ್ ಗೆ ಸೀಮಿತವಾಗುವ ಅಪಾಯವಿದೆ. ಮಹತ್ವಾಕಾಂಕ್ಷಿ ಚಿತ್ರ ನಿರ್ದೇಶಕಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು, ತಮ್ಮ ಗುರುತನ್ನು ಮೂಡಿಸಲು ಮತ್ತು ಲಿಂಗ ಸಮಾನತೆಯ ನಿಟ್ಟಿನಲ್ಲಿ ಕೊಡುಗೆ ನೀಡಲು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಅವಳ ಹೆಜ್ಜೆಯ ಸ್ಥಾಪಕಿ ಶಾಂತಲಾ ದಾಮ್ಲೆಯವರ ಆಶಯ.

“ಅವಳ ಹೆಜ್ಜೆ” ಬಗ್ಗೆ
“ಅವಳ ಹೆಜ್ಜೆ” – ಹೆಣ್ಣಿನ ಹೆಜ್ಜೆಗುರುತು ಆಟದ ಮೈದಾನದಿಂದ ಬೋರ್ಡ್ ರೂಂವರೆಗೂ ಎಲ್ಲೆಡೆ ಕಾಣುವ ಆಶಯದೊಂದಿಗೆ ಶಾಂತಲಾ ದಾಮ್ಲೆಯವರು ಆರಂಭಿಸಿದ ಸಾಮಾಜಿಕ ಸಂಕಲ್ಪ. ಕಳೆದ ಎಂಟು ವರ್ಷಗಳಲ್ಲಿ ಅವಳ ಹೆಜ್ಜೆ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿ ಕಳೆದ ವರ್ಷ ಗುಬ್ಬಿವಾಣಿ ಟ್ರಸ್ಟ್ ನೊಂದಿಗೆ ವಿಲೀನವಾಗಿದೆ.

“ಅವಳ ಹೆಜ್ಜೆ ಕಿರುಚಿತ್ರೋತ್ಸವ” ಕೇವಲ ಕಿರುಚಿತ್ರ ಸ್ಪರ್ಧೆಯಲ್ಲ. ಮಹಿಳಾ ಮುಖ್ಯಪಾತ್ರಗಳಿಗೆ, ಮಹಿಳೆಯರ ಅನುಭವ ಮತ್ತು ದೃಷ್ಟಿಕೋನಗಳಿಗೆ ವೇದಿಕೆ ಸೃಷ್ಟಿಸುವುದರ ಮೂಲಕ ಸಮಾನತೆಯತ್ತ ಇಡುತ್ತಿರುವ ದಿಟ್ಟ ಹೆಜ್ಜೆ. ಸಲ್ಲಿಕೆ ಮಾರ್ಗಸೂಚಿಗಳಿಗಾಗಿ, www.avalahejje.net ಗೆ ಭೇಟಿ ನೀಡಿ. ಪ್ರಶ್ನೆಗಳಿದ್ದಲ್ಲಿ, avalahejjefilms@gmail.com ಗೆ ಈಮೇಲ್ ಅಥವಾ 8867747236 ಗೆ ವಾಟ್ಸಾಪ್ ಮಾಡಲು ಆಯೋಜಕರು ತಿಳಿಸಿದ್ದಾರೆ.

P

Peepal Media Desk

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version