ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

P

Peepal Media Desk • ಅಂಕಣ, ವಿಶೇಷ

• 2 ನಿಮಿಷದ ಓದು

ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ನಾಡದೇವತೆ ಚಾಮುಂಡೇಶ್ವರಿ ದೇವಿಯ ಪೂಜೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಾಹಿತಿ ಪ್ರೊ.ಹಂಪಾ ನಾಗರಾಜಯ್ಯ ಅವರು ಜಗದ್ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ಮೊದಲ ದಿನ ದಸರಾದ ಕಾರ್ಯಕ್ರಮಗಳ ವಿವರ
ದಸರಾ ಚಲನಚಿತ್ರೋತ್ಸವ ಉದ್ಘಾಟನೆ

ದಸರಾ ನಿಮಿತ್ತ ಇಂದು ಬೆಳಗ್ಗೆ 11:30 ಗಂಟೆಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಭವನದಲ್ಲಿ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ದಸರಾ ಆಹಾರ ಮೇಳ ಉದ್ಘಾಟನೆ
ಮಧ್ಯಾಹ್ನ 11:30 ಗಂಟೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಾಹರಗಳ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಲಿದ್ದಾರೆ

ಫಲಪುಷ್ಪ ಪ್ರದರ್ಶನ ಉದ್ಘಾಟನೆ
ಮಧ್ಯಾಹ್ನ 12:30 ಗಂಟೆಗೆ ನಗರದ ಕುಪ್ಪಣ್ಣ ಪಾರ್ಕ್ (ನಿಶಾದ್ ಬಾಗ್) ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕೂಡ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ದಸರಾ ಕುಸ್ತಿ ಉದ್ಘಾಟನೆ
ಸಂಜೆ 04 ಗಂಟೆಗೆನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅವರಣದಲ್ಲಿನ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ “ದಸರಾ ಕುಸ್ತಿ ಪಂದ್ಯಾವಳಿ” ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ದಸರಾ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ ಉದ್ಘಾಟನೆ
ಸಂಜೆ 4 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ “ರಾಜ್ಯಮಟ್ಟದ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ”ದಲ್ಲಿ ರಚಿಸಲಾದ ಕಲಾ ಕೃತಿಗಳ ಪ್ರದರ್ಶನ, ಲಲಿತ ಕಲೆ, ಕರಕುಶಲ ಕಲೆಗಳ ಕಲಾಕೃತಿ ಪ್ರದರ್ಶನ ಮತ್ತು ರಾಷ್ಟ್ರಮಟ್ಟದ ಕರಕುಶಲ ಕಲೆಗಳ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ಸಿಎಂ ಕಪ್‌ ಕ್ರೀಡಾಕೂಟಕ್ಕೆ ಚಾಲನೆ
ಸಂಜೆ 4:30 ಗಂಟೆಗೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ.

ದಸರಾ ಪುಸ್ತಕ ಮೇಳ ಉದ್ಘಾಟನೆ
ಸಂಜೆ 5 ಗಂಟೆಗೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಮೇಳ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ನವರಾತ್ರಿ ಜಾನಪದ ರಂಗ ಉತ್ಸವ ಉದ್ಘಾಟನೆ
ಸಂಜೆ 5:30 ಗಂಟೆಗೆ ನಗರದ ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತದ ರಂಗ ಮಂದಿರದಲ್ಲಿ “ನವರಾತ್ರಿ ಜಾನಪದ ರಂಗ ಉತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಹ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ.

ಸಾಂಸ್ಕೃತಿಕಾ ಕಾರ್ಯಕ್ರಮ ಉದ್ಘಾಟನೆ
ಸಂಜೆ 6 ಗಂಟೆಗೆ ಅರಮನೆಯ ಆವರಣದಲ್ಲಿ ನಾಡಹಬ್ಬ ಪ್ರಯುಕ್ತ ದಸರಾ ಸಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್​​ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.

ದಸರಾ ದೀಪಾಲಂಕಾರಕ್ಕೆ ಚಾಲನೆ
ಸಂಜೆ 6.30ಕ್ಕೆ ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಮಂಟಪದ ಬಳಿ ವಿದ್ಯುತ್ ದೀಪಾಲಂಕಾರ ಹಾಗೂ ದೀಪಾಲಂಕಾರಗೊಂಡಿರುವ ವಿದ್ಯುತ್ ರಥದ ಚಾಲನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಲಿದ್ದಾರೆ.

ವಸ್ತು ಪ್ರದರ್ಶನ ಉದ್ಘಾಟನೆ
ರಾತ್ರಿ 7.30ಕ್ಕೆ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಯೋಜಿಸಲಾಗಿರುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ

P

Peepal Media Desk

Peepal Media · ಅಂಕಣ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version