ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಹುಲ್ ಗಾಂಧಿ ಹೋರಾಟಕ್ಕೆ ಬಗ್ಗಿದ ಕೇಂದ್ರ ಸರ್ಕಾರ : ಸಿಎಂ ಮೆಚ್ಚುಗೆ

P

Peepal Media Desk • ವಿಶೇಷ

• 2 ನಿಮಿಷದ ಓದು

ರಾಹುಲ್ ಗಾಂಧಿ ಹೋರಾಟಕ್ಕೆ ಬಗ್ಗಿದ ಕೇಂದ್ರ ಸರ್ಕಾರ : ಸಿಎಂ ಮೆಚ್ಚುಗೆ

ಕೊಟ್ಟ ಮಾತನ್ನು ತಪ್ಪಿ ನಡೆದು ಸುಳ್ಳುಗಳಿಂದ ಭಾರತೀಯರನ್ನು ಮರಳು ಮಾಡುವುದರಲ್ಲಿ ಮೋದಿ ನಿಸ್ಸೀಮರು
ಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರ ಹೋರಾಟಕ್ಕೆ ಸಿಕ್ಕ ಮಾನ್ಯತೆ
ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ

ಹುಬ್ಬಳ್ಳಿ ಮೇ 1: ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ದೇಶ ವಿರೋಧಿ ವರ್ತನೆ, ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ಜನದ್ರೋಹವನ್ನು ಖಂಡಿಸಿ ನಡೆದ ಜನತಾ ಸಮಾವೇಶದಲ್ಲಿ ಮಾತನಾಡಿದರು.

ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಅಕ್ಕಿಯಿಂದ ಚಿನ್ನದವರೆಗೂ ಎಲ್ಲದರ ಬೆಲೆ ಆಕಾಶಕ್ಕೆ ಏರಿದೆ. ದೇಶದ, ರಾಜ್ಯದ ಜನರಿಗೆ ಬಿಜೆಪಿ ಪರಿವಾರದ ಈ ಜನದ್ರೋಹ ಅರ್ಥವಾಗಿದೆ. ಇದನ್ನು ಮರೆ ಮಾಚಲು ತಮ್ಮ ಜನದ್ರೋಹವನ್ನು ಮುಚ್ಚಿಕೊಳ್ಳಲು ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು.

ಉಪ್ಪು, ಸಕ್ಕರೆ, ಟೀ, ಕಾಫಿ, ಅಕ್ಕಿ, ಬೇಳೆ, ಎಣ್ಣೆ, ಕಾಳು, ಚಿನ್ನ, ಬೆಳ್ಳಿ, ರಸಗೊಬ್ಬರ, ಔಷಧ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಎಲ್ಲದರ ಬೆಲೆ ಆಕಾಶಕ್ಕೆ ಏರಿಸಿರುವ ಮೋದಿಯವರೇ ನೀವು ಯಾವುದನ್ನು ತಾನೆ ಬಿಟ್ಟಿದ್ದೀರಿ ಎಂದರು.

ಡಾಲರ್ ಬೆಲೆ 2014 ರಲ್ಲಿ 59 ರೂಪಾಯಿ ಇತ್ತು. ಇವತ್ತು 86 ರೂಪಾಯಿ ಆಗಿದೆ. ಇದಕ್ಕೆ ಯಾರು ಕಾರಣರು ಮೋದಿಯವರೇ ? ಇದೇನಾ ನಿಮ್ಮ ಅಚ್ಛೆ ದಿನ್ ಎಂದು ವ್ಯಂಗ್ಯವಾಡಿದರು.

50 ಕೆಜಿ ಸಿಮೆಂಟ್ ಬೆಲೆ 2014 ರಲ್ಲಿ 200 ಇದ್ದದ್ದು ಈಗ 450 ರೂ ಆಗಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 425 ಇದ್ದದ್ದು ಇಂದು 850 ದಾಟಿದೆ. ಶೇ100 ರಷ್ಟು ಬೆಲೆ ಏರಿಕೆ ಮಾಡಿದ್ದೀರಿ. ಜನದ್ರೋಹದ ಪರಮಾವಧಿ ಮುಂದುವರೆಸಿ ಸಿಲಿಂಡರ್ ಸಬ್ಸಿಡಿ ತೆಗೆದು ಹಾಕಿ ಬಡವರ ಮತ್ತು ಮಧ್ಯಮ ವರ್ಗದವರ ವಿರೋಧಿ ಆಗಿರುವ ಮೋದಿಯವರೇ ನಿಮ್ಮ ವಂಚನೆಗೆ ಕೊನೆಯೇ ಇಲ್ಲವೇ ಎಂದು ಪ್ರಶ್ನಿಸಿದರು.

ಪ್ರಹ್ಲಾದ್ ಜೋಶಿಯವರೇ ನೀವು ಮತ್ತು ಮೋದಿಯವರು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಲೇ ಇದ್ದೀರಿ. ಆದರೆ, ನಿಮ್ಮ ಚಾಳಿಯನ್ನು ನಮ್ಮ ಮೇಲೆ ಹೊರಿಸಲು ಯತ್ನಿಸುತ್ತಿದ್ದೀರಿ.‌ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಹಾಲಿನ ದರ 4ರೂ ಹೆಚ್ಚಿಸಿ ಇಷ್ಟೂ ಹಣವನ್ನೂ ರೈತರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಹತ್ತು ಪೈಸೆ ಕೂಡ ಸರ್ಕಾರಕ್ಕೆ ಬರುವುದಿಲ್ಲ. ಆದರೆ, ನೀವು ಹೆಚ್ಚಿಸಿದ ಬೆಲೆ ಏರಿಕೆ ಯಾವ ಭಾರತೀಯರಿಗೆ ಸಿಗುತ್ತಿದೆ ಹೇಳಿ ಎಂದರು.

ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಅಸಮಾನತೆ, ತಾರತಮ್ಯ ಹೋಗಿಲ್ಲ ಎಂದರು.

ಆದ್ದರಿಂದ ನಾವು ನಮ್ಮ ಪ್ರಣಾಳಿಕೆಯಲ್ಲಿ ಆರ್ಥಿಕ, ಸಾಮಾಜಿಕ, ಜಾತಿ ಗಣತೆ ಬಗ್ಗೆ ಭರವಸೆ ಕೊಟ್ಟಿದ್ದೆವು. ನಾವು ಮಾಡಿದ ಘೋಷಣೆಯಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಮತ್ತು ರಾಹುಲ್ ಗಾಂಧಿಯವರು ಪಾರ್ಲಿಮೆಂಟಿನಲ್ಲಿ ನಿರಂತರ ಧ್ವನಿ ಎತ್ತಿ ಹೋರಾಟ ನಡೆಸಿದ್ದರು. ಇದರ ಪರಿಣಾಮ ಈಗ ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದಿದೆ. ಇದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ  ಖರ್ಗೆಯವರ ಸೈದ್ಧಾಂತಿಕ ಬದ್ಧತೆಗೆ ಸಿಕ್ಕ ಗೆಲುವು ಎಂದರು.

P

Peepal Media Desk

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version