ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲಕ್ಷಗಟ್ಟಲೆ Spam ಖಾತೆಗಳಿಗೆ ಕತ್ತರಿ ಹಾಕಿದ ವಾಟ್ಸಾಪ್!

PPeepal Media

Peepal Media ವಿಶೇಷ

• 1 ನಿಮಿಷದ ಓದು

ಲಕ್ಷಗಟ್ಟಲೆ Spam ಖಾತೆಗಳಿಗೆ ಕತ್ತರಿ ಹಾಕಿದ ವಾಟ್ಸಾಪ್!

2021 ರ ಹೊಸ ಮಾಹಿತಿ ತಂತ್ರಜ್ಞಾನದ ನಿಯಮಗಳ ಅಡಿಯಲ್ಲಿ ಕೇವಲ ಸೆಪ್ಟೆಂಬರ್ ತಿಂಗಳ ಒಂದರಲ್ಲೇ ಭಾರತದಲ್ಲಿ 26 ಲಕ್ಷಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಮೆಟಾ-ಮಾಲೀಕತ್ವದ ‘ವಾಟ್ಸಾಪ್’ ಮಂಗಳವಾರ ಹೇಳಿದೆ. ಸಾಮಾಜಿಕ ಮಾಧ್ಯಮದಂತಹ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ಹಾಕಲು ವಾಟ್ಸಾಪ್ ನಲ್ಲಿ ಹಲವು ತಿದ್ದುಪಡಿ ಮಾಡಲಾಗುತ್ತಿದ್ದು, ಕೆಲವು ವರ್ಷಗಳ ಮಾರ್ಪಾಡುಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದೆ. 

ಒಟ್ಟಾರೆ ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು ಹೊಂದಿರುವ (ಥರ್ಡ್ ಪಾರ್ಟಿ ಡೇಟಾ ಪ್ರಕಾರ) ವಾಟ್ಸಾಪ್ ಮೆಸೇಜಿಂಗ್ ವಲಯ, ಭಾರತದಲ್ಲಿ ಕೇವಲ ಸೆಪ್ಟೆಂಬರ್ ಒಂದೇ ತಿಂಗಳಲ್ಲಿ 666 ದೂರು ವರದಿಗಳನ್ನು ಸ್ವೀಕರಿಸಿದ್ದೇವೆ ಎಂದು ಹೇಳಿಕೊಂಡಿದೆ. ಈ ದೂರುಗಳ ಅನ್ವಯ ಇಲ್ಲಿಯ ವರೆಗೆ 23 ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

“ಮಾಹಿತಿ ತಂತ್ರಜ್ಞಾನ ನಿಯಮಗಳು 2021 ರ ಪ್ರಕಾರ, ನಾವು ‘ಸೆಪ್ಟೆಂಬರ್ 2022 ರ ತಿಂಗಳಿಗೆ ನಮ್ಮ ವರದಿಯನ್ನು ಪ್ರಕಟಿಸಿದ್ದೇವೆ. ಬಳಕೆದಾರ ಸುರಕ್ಷತಾ ದೃಷ್ಟಿಯಿಂದ ಬಳಕೆದಾರರ ಕಡೆಯಿಂದ ಸ್ವೀಕರಿಸಿದ ದೂರುಗಳ ವಿವರಗಳನ್ನು ಮತ್ತು ಇದಕ್ಕೆ ಅನುಗುಣವಾಗಿ WhatsApp ಕೈಗೊಂಡ ಕ್ರಮಗಳ ಬಗ್ಗೆ ಪ್ರಕಟಿಸಿದ್ದೇವೆ. ಇದರ ಜೊತೆಗೆ ನಮ್ಮ ಪ್ಲಾಟ್ಫಾರ್ಮ್ನಲ್ಲಿನ ದುರ್ಬಳಕೆಯನ್ನು ತಡೆಗಟ್ಟಲು ಮತ್ತು ಅದನ್ನು ಎದುರಿಸಲು ಮಾಹಿತಿ ತಂತ್ರಜ್ಞಾನದ ನಿಯಮಗಳ ಹೊರತಾಗಿ WhatsApp ಸ್ವಂತ ತಡೆಗಟ್ಟುವ ಕ್ರಮಗಳನ್ನು ಕೂಡ ಒಳಗೊಂಡಿದೆ” ಎಂದು ‘ವಾಟ್ಸಾಪ್’ ಹೇಳಿಕೆಯಲ್ಲಿ ತಿಳಿಸಿದೆ.

2021 ರ ನವೀಕರಣಗೊಂಡ ಮಾಹಿತಿ ತಂತ್ರಜ್ಞಾನ ನಿಯಮ 2021 ರ ಅಡಿಯಲ್ಲಿ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಮಾಸಿಕ ಅನುಸರಣೆ ವರದಿಗಳನ್ನು ಪ್ರಕಟಿಸಬೇಕು. ಏತನ್ಮಧ್ಯೆ, ಮುಕ್ತ, ಸುರಕ್ಷಿತ, ವಿಶ್ವಾಸಾರ್ಹತೆ ಉಳಿಸುವ ನಿಟ್ಟಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು “ಡಿಜಿಟಲ್ ನಾಗರೀಕರ” ಹಕ್ಕುಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಕೆಲವು ತಿದ್ದುಪಡಿಗಳನ್ನು ಸೂಚಿಸಿದೆ. ಈ ನಿಯಮಗಳ ಅಡಿಯಲ್ಲಿ ವಾಟ್ಸಾಪ್ ಸಂಸ್ಥೆ ಆಗಸ್ಟ್‌ ತಿಂಗಳಲ್ಲೂ ಸಹ ಭಾರತದಲ್ಲಿ 23 ಲಕ್ಷಕ್ಕೂ ಹೆಚ್ಚು Spam ಖಾತೆಗಳನ್ನು ನಿಷೇಧಿಸಿತ್ತು.

PPeepal Media

Peepal Media

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು