Monday, August 26, 2024

ಸತ್ಯ | ನ್ಯಾಯ |ಧರ್ಮ

ಕೊಲೆ ಆರೋಪಿ ದರ್ಶನ್‌ಗೆ ಸ್ಪೇಷಲ್‌ ಟ್ರೀಟ್‌ಮೆಂಟ್‌: ತಪ್ಪಿತಸ್ಥರ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ವಿಲ್ಸನ್‌ ಗಾರ್ಡನ್‌ ನಾಗನ ಜೊತೆ ಹರಟೆ ಹೊಡೆಯುತ್ತಿರುವ ಫೋಟೋ ಬಹಿರಂಗಗೊಳ್ಳುತ್ತಲೇ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆಯೂ ತಾಕೀತು ಮಾಡಿದ್ದಾರೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌, ಜೈಲಿನ ಒಳಗೆ ಸಹಚರರ ಜೊತೆ ಕುರ್ಚಿ ಮೇಲೆ ಕುಳಿತು ಕಾಫಿ ಹೀರುತ್ತಾ, ಸಿಗರೇಟ್‌ ಸೇದುತ್ತಿದ್ದಾರೆ ಎನ್ನಲಾದ ಫೋಟೊ ಬಹಿರಂಗವಾಗಿದೆ.

ಬೆಡ್ ಮೇಲೆ ಕುಳಿತು ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಿರುವ ವಿಡಿಯೊ ಸಹ ಸಾಮಾಜಿಕ‌ ಮಾಧ್ಯಮದಲ್ಲಿ ಹರಿದಾಡುತ್ತಿದೆ.ಈ ಪ್ರಕರಣಕ್ಕೆ ಸಂಬಂಧಿಸಿಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ 7 ಸಿಬ್ಬಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದ್ದು, ಇದರಲ್ಲಿ ಶಾಮೀಲು ಆದ ಸಿಬ್ಬಂದಿಗಳ ಬಗ್ಗೆಯೂ ತನಿಖೆ ನಡೆಸಲು ಸಿಎಂ ಸೂಚಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page