ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕ್ರಿಕೆಟ್ : ಏಷ್ಯಾ ಕಪ್ ಟೂರ್ನಿಯಿಂದ ಹೊರಗುಳಿಯಲು ಬಿಸಿಸಿಐ ನಿರ್ಧಾರ

PPeepal Media Desk

Peepal Media Desk • ಕ್ರೀಡೆ

• 1 ನಿಮಿಷದ ಓದು

ಕ್ರಿಕೆಟ್ : ಏಷ್ಯಾ ಕಪ್ ಟೂರ್ನಿಯಿಂದ ಹೊರಗುಳಿಯಲು ಬಿಸಿಸಿಐ ನಿರ್ಧಾರ

ಮುಂದಿನ ದಿನಗಳಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿಂದ ಆಯೋಜಿಸಲ್ಪಡುವ ಯಾವುದೇ ಕ್ರಿಕೆಟ್ ಟೂರ್ನಿ ಮತ್ತು ಕಾರ್ಯಕ್ರಮಗಳಿಂದ ದೂರ ಇರುವುದಾಗಿ ಬಿಸಿಸಿಐ ಹೇಳಿಕೊಂಡಿದೆ. ಹೀಗಾಗಿ 2025 ರ ಏಷ್ಯಾ ಕಪ್ ಟೂರ್ನಿಯಲ್ಲೂ ಭಾರತ ದೂರ ಇರುವ ಬಗ್ಗೆ ನಿರ್ಧರಿಸಲಾಗಿದೆ.

ಪ್ರಮುಖ ಕಾರಣವಾಗಿ, ಪ್ರಸ್ತುತ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷರೂ ಆಗಿರುವ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಗೆ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಬಿಸಿಸಿಐ ಹೇಳಿಕೊಂಡಿದೆ. ಪಾಕಿಸ್ತಾನದ ವ್ಯಕ್ತಿ ಎಸಿಸಿ ಮುಖ್ಯಸ್ಥರಾಗಿರುವಾಗ ಅಂತಹ ಟೂರ್ನಿಯಲ್ಲಿ ಭಾರತ ತಂಡ ಆಡುವುದಿಲ್ಲ ಎಂದಿದೆ.

ಮುಂದಿನ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ತಂಡಗಳ ಏಷ್ಯೋ ಕಪ್, ಸೆಪ್ಟೆಂಬರ್ ನಲ್ಲಿ ನಡೆಯಲಿರುವ ದ್ವೈವಾರ್ಷಿಕ ಪುರುಷರ ಏಷ್ಯಾ ಕಪ್ ಟೂರ್ನಿಯಲ್ಲೂ ಭಾರತ ಆಡದಿರಲು ನಿರ್ಧರಿಸಿದೆ. ಈ ಬಗ್ಗೆ ಎಸಿಸಿ ಗೆ ಮಾಹಿತಿ ನೀಡಿರುವ ಬಿಸಿಸಿಐ ಪಾಕ್ ಮುಖ್ಯಸ್ಥರು ಇರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದೆ.

ಈ ನಿರ್ಧಾರವು ಪಾಕಿಸ್ತಾನ ಕ್ರಿಕೆಟ್ ಅನ್ನು ಪ್ರತ್ಯೇಕಿಸುವ ಕ್ರಮದ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ. “ಪಾಕಿಸ್ತಾನ ಸಚಿವರಾಗಿರುವ ಎಸಿಸಿ ಆಯೋಜಿಸುವ ಪಂದ್ಯಾವಳಿಯಲ್ಲಿ ಭಾರತ ತಂಡ ಆಡಲು ಸಾಧ್ಯವಿಲ್ಲ. ಇದು ರಾಷ್ಟ್ರದ ಭಾವನೆ. ಮುಂಬರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ನಿಂದ ನಾವು ಹಿಂದೆ ಸರಿಯುವ ಬಗ್ಗೆ ನಾವು ಎಸಿಸಿಗೆ ಮೌಖಿಕವಾಗಿ ಸಂವಹನ ನಡೆಸಿದ್ದೇವೆ ಮತ್ತು ಅವರ ಕಾರ್ಯಕ್ರಮಗಳಲ್ಲಿ ನಮ್ಮ ಭವಿಷ್ಯದ ಭಾಗವಹಿಸುವಿಕೆಯನ್ನು ಸಹ ತಡೆಹಿಡಿಯಲಾಗಿದೆ. ನಾವು ಭಾರತ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

PPeepal Media Desk

Peepal Media Desk

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು