ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾಳೆಯಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಆರಂಭ

PPeepal Media

Peepal Media ಕ್ರೀಡೆ

• 1 ನಿಮಿಷದ ಓದು

ನಾಳೆಯಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಆರಂಭ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಭಾಗವಾಗಿರುವ ಈ ಪಂದ್ಯ ನಾಳೆ (ಜನವರಿ 22) ಸಂಜೆ 7 ಗಂಟೆಗೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

ಇನ್ನು ಆತಿಥೇಯ ಭಾರತೀಯ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದರೆ, ಜೋಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಎರಡೂ ತಂಡಗಳು ಶನಿವಾರ (ಜನವರಿ 19) ಕೋಲ್ಕತ್ತಾಗೆ ಆಗಮಿಸಿದ್ದು, ಈ ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿವೆ.

ಮೂರು ವರ್ಷಗಳ ನಂತರ ಐತಿಹಾಸಿಕ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯ ಇದಾಗಿರುವುದರಿಂದ ಈ ಪಂದ್ಯವು ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾದ ಟಿ20 ದಾಖಲೆಯೂ ಅತ್ಯುತ್ತಮವಾಗಿದೆ.

ಇಲ್ಲಿಯವರೆಗೆ ಉಭಯ ತಂಡಗಳ ನಡುವೆ ಒಟ್ಟು 24 ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 11 ಪಂದ್ಯಗಳನ್ನು ಗೆದ್ದಿದೆ.

ಯುವಕರಿಂದ ಕೂಡಿರುವ ಭಾರತ ತಂಡವು ವಿಶ್ವಕಪ್ ನಂತರ ಉತ್ಸಾಹದಲ್ಲಿದೆ. ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್ ಮತ್ತು ನಿತೀಶ್ ಕುಮಾರ್ ಅವರಂತಹ ಹಾರ್ಡ್ ಹಿಟ್ಟರ್‌ಗಳನ್ನು ಒಳಗೊಂಡ ತಂಡವು ಮೈದಾನದಲ್ಲಿ ಬೌಂಡರಿಗಳ ಮಳೆಗರೆಸುತ್ತಿದೆ.

ಮತ್ತೊಂದೆಡೆ, ಇಂಗ್ಲಿಷ್ ತಂಡವೂ ಕಡಿಮೆಯಿಲ್ಲ ಎಂದೇ ಹೇಳಬೇಕು. ಟೆಸ್ಟ್ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ತಂಡಕ್ಕೆ ಆಕ್ರಮಣಶೀಲತೆಯನ್ನು ಕಲಿಸಿ, ಕೋಚ್ ಆಗಿ ತಂಡದ ಆಟವನ್ನು ಮುಂದಿನ ಹಂತಕ್ಕೆ ಕೊಂಡೊಯ್ದ ಮೆಕಲಮ್, ಈಗ ಟಿ20 ಕೋಚ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ತಮ್ಮ ತರಬೇತಿಯಲ್ಲಿ ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ತಂಡವು ಜೋಸ್ ಬಟ್ಲರ್, ಫಿಲ್ ಸಾಲ್ಟ್, ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್ ಮತ್ತು ಹ್ಯಾರಿ ಬ್ರೂಕ್‌ರಂತಹ ಆಕ್ರಮಣಕಾರಿ ಆಟಗಾರರನ್ನು ಹೊಂದಿದೆ.

ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ುಪ ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್‌ ಕೀಪರ್).

ಇಂಗ್ಲೆಂಡ್: ಜೋಸ್ ಬಟ್ಲರ್ (ಸಿ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್.

PPeepal Media

Peepal Media

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು