ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಫ್ಲೋರಿಡಾ | ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತಕ್ಕೆ ಗೆಲುವು, ಹೊಸ ದಾಖಲೆ ಬರೆದ ಜೈಸ್ವಾಲ್

P

Peepal Media Desk • ಕ್ರೀಡೆ

• 1 ನಿಮಿಷದ ಓದು

ಫ್ಲೋರಿಡಾ | ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತಕ್ಕೆ ಗೆಲುವು, ಹೊಸ ದಾಖಲೆ ಬರೆದ ಜೈಸ್ವಾಲ್

ಈ ಏಕಪಕ್ಷೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಭಾರತ ತಂಡವು 9 ವಿಕೆಟ್ ಗಳಿಂದ ಸೋಲಿಸಿತು. ವೆಸ್ಟ್ ಇಂಡೀಸ್ ನೀಡಿದ್ದ 179 ರನ್ ಗಳ ಗುರಿಯನ್ನು ಭಾರತ 17 ಓವರ್ ಗಳಲ್ಲಿ ಕೇವಲ ಒಂದು ವಿಕೆಟ್ ನಷ್ಟದಲ್ಲಿ ಬೆನ್ನುಹತ್ತಿತು. ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (ಔಟಾಗದೆ 84; 51 ಎಸೆತಗಳಲ್ಲಿ 11×4, 3×6) ಮತ್ತು ಶುಭಮನ್ ಗಿಲ್ (77; 47 ಎಸೆತಗಳಲ್ಲಿ 3×4, 5×6) ಅರ್ಧಶತಕ ಗಳಿಸಿದರು. ಈ ಗೆಲುವಿನೊಂದಿಗೆ ಭಾರತ 5 ಪಂದ್ಯಗಳ ಟಿ20 ಸರಣಿಯನ್ನು 2-2ರಲ್ಲಿ ಸಮಬಲಗೊಳಿಸಿದೆ.

ನಾಲ್ಕನೇ T20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅಪರೂಪದ ದಾಖಲೆ ಬರೆದಿದ್ದಾರೆ. ಸಣ್ಣ ವಯಸ್ಸಿನಲ್ಲೇ T20 ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ ನಾಲ್ಕನೇ ಆಟಗಾರನಾಗಿ ಅವರು ಗುರುತಿಸಿಕೊಂಡಿದ್ದಾರೆ. ನಾಲ್ಕನೇ ಟಿ20 ಪಂದ್ಯದಲ್ಲಿ 84 ರನ್ ಗಳಿಸಿದ ಯಶಸ್ವಿಗೆ ಈಗ 21 ವರ್ಷ 227 ದಿನಗಳು ತುಂಬಿವೆ. ಇತ್ತೀಚೆಗಷ್ಟೇ ಹೈದರಾಬಾದ್ ಆಟಗಾರ ತಿಲಕ್ ವರ್ಮಾ ಕೂಡ ಅರ್ಧ ಶತಕ ಸಿಡಿಸಿದ್ದು ಗೊತ್ತೇ ಇದೆ. ಅದೇ ಸರಣಿಯ ಎರಡನೇ ಟಿ20ಯಲ್ಲಿ ಅವರು 41 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 51 ರನ್ ಗಳಿಸಿದರು.

ನಾಯಕ ರೋಹಿತ್ ಶರ್ಮಾ ಭಾರತ ಪರ ಟಿ20ಯಲ್ಲಿ ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ. ರೋಹಿತ್ 20 ವರ್ಷ 143 ದಿನದಷ್ಟು ವಯಸ್ಸಿನಲ್ಲಿ ಅರ್ಧ ಶತಕ ಬಾರಿಸಿದ್ದರು. ತಿಲಕ್ ವರ್ಮಾ (20 ವರ್ಷ 271 ದಿನ) ಎರಡನೇ ಸ್ಥಾನದಲ್ಲಿದ್ದರೆ, ಯುವ ವಿಕೆಟ್ ಕೀಪರ್ ರಿಷಬ್ ಪಂತ್ (21 ವರ್ಷ 38 ದಿನ) ಮೂರನೇ ಸ್ಥಾನದಲ್ಲಿದ್ದಾರೆ. ಈಗ ಈ ಪಟ್ಟಿಗೆ ನಾಲ್ಕನೇ ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಸೇರಿಕೊಂಡಿದ್ದಾರೆ. ವಿಶೇಷವೆಂದರೆ ಇವರಲ್ಲಿ ಮೂವರು ಎಡಗೈ ಬ್ಯಾಟರ್ಸ್.

ಮತ್ತೊಂದೆಡೆ ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ತಮ್ಮ ಹೆಸರಿನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. T20I ಗಳಲ್ಲಿ ಭಾರತದ ಪರವಾಗಿ ಎರಡನೇ ಅತ್ಯಧಿಕ ಜೊತೆಯಾಟವನ್ನು (165) ಸ್ಥಾಪಿಸಿದ ಜೋಡಿಯಾಗಿ ತಮ್ಮ ಹೆಸರನ್ನು ದಾಖಲೆ ಪಟ್ಟಿಯಲ್ಲಿ ಅಚ್ಚೊತ್ತಿದ್ದಾರೆ. ಈ ಜೋಡಿಯು ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ದಾಖಲೆಯನ್ನು ಸರಿಗಟ್ಟಿದ್ದಾರೆ. 2017ರಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್‌-ರಾಹುಲ್‌ 165 ರನ್‌ಗಳ ಜೊತೆಯಾಟವಾಡಿದ್ದರು. ಈ ವಿಷಯದಲ್ಲಿ ದೀಪಕ್ ಹೂಡಾ-ಸಂಜು ಸ್ಯಾಮ್ಸನ್ ಜೋಡಿ ಅಗ್ರಸ್ಥಾನದಲ್ಲಿದೆ. ಅವರು 2022ರಲ್ಲಿ ಐರ್ಲೆಂಡ್ ವಿರುದ್ಧ 176 ರನ್ನುಗಳ ಜೊತೆಯಾಟವನ್ನು ದಾಖಲಿಸಿದ್ದರು.

ವಿಷಯಗಳು: #cricket #india #peepal #peepalmedia
P

Peepal Media Desk

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version