ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಚಿನ್ ಹೆಸರನ್ನು ರಾಹುಲ್‌ ಮತ್ತು ಸಚಿನ್‌ ಹೆಸರನ್ನು ಮಿಕ್ಸ್‌ ಮಾಡಿ ಇಟ್ಟಿದ್ದಲ್ಲ! ಹಾಗಿದ್ದರೆ ನಿಜ ಸಂಗತಿಯೇನು?

PPeepal Media Desk

Peepal Media Desk ಕ್ರೀಡೆ

• 1 ನಿಮಿಷದ ಓದು

ರಚಿನ್ ಹೆಸರನ್ನು ರಾಹುಲ್‌ ಮತ್ತು ಸಚಿನ್‌ ಹೆಸರನ್ನು ಮಿಕ್ಸ್‌ ಮಾಡಿ ಇಟ್ಟಿದ್ದಲ್ಲ! ಹಾಗಿದ್ದರೆ ನಿಜ ಸಂಗತಿಯೇನು?

ಮುಂಬೈ: ನ್ಯೂಜಿಲೆಂಡ್ ಕ್ರಿಕೆಟಿಗ ರಚಿನ್ ರವೀಂದ್ರ ಸದ್ಯ ವಿಶ್ವಕಪ್ ನಲ್ಲಿ ಅಗ್ರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಹೊತ್ತಿನಲ್ಲೇ ಅವರ ಹೆಸರಿನ ಕುರಿತು ಕತೆಯೊಂದು ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯವಾಗಿದೆ. ಕ್ರಿಕೆಟಿಗರಾಗಿರುವ ರಚಿನ್ ತಂದೆ ರವಿ ಕೃಷ್ಣಮೂರ್ತಿ ಈ ವಿಚಾರದ ಕುರಿತು ಸ್ಪಷ್ಟನೆ ನೀಡಿದ್ದಾರೆ. ರಾಹುಲ್ ದ್ರಾವಿಡ್ ಮತ್ತು ಸಚಿನ್ ತೆಂಡೂಲ್ಕರ್ ಹೆಸರುಗಳನ್ನು ಬೆರೆಸಿ ರಚಿನ್ ಎಂದು ಹೆಸರಿಟ್ಟಿದ್ದು ಎನ್ನುವ ವಿಷಯವನ್ನು ರಚಿನ್ ತಂದೆ ರವಿ ಕೃಷ್ಣಮೂರ್ತಿ ನಿರಾಕರಿಸಿದ್ದಾರೆ.

ಭಾರತೀಯ ಮೂಲದ ರಚಿನ್ ರವೀಂದ್ರ ಪ್ರಸ್ತುತ ನ್ಯೂಜಿಲೆಂಡ್ ಪರ ಆಡುತ್ತಿದ್ದಾರೆ. ಅವರ ‌ಅಜ್ಜ ಅಜ್ಜಿಯರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ವಿಶ್ವಕಪ್ ವೇಳೆ ಅವರು ಅಜ್ಜಿಯ ಮನೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ರಚಿನ್ ಅವರ ತಂದೆ ರವಿ ಕೃಷ್ಣಮೂರ್ತಿ ತಮ್ಮ ಮಗನ ಹೆಸರಿನ ಕುರಿತಾದ ಕುತೂಹಲಗಳನ್ನು ನಿವಾರಿಸಿದರು. ರಚಿನ್‌ಗೆ ದ್ರಾವಿಡ್ ಮತ್ತು ಸಚಿನ್ ಹೆಸರನ್ನು ಸೇರಿಸಿ ಇಟ್ಟಿಲ್ಲ ಎಂದಿದ್ದಾರೆ. ರಚಿನ್ ಹುಟ್ಟಿದಾಗ ಅವರ ಪತ್ನಿ ಈ ಹೆಸರನ್ನು ಸೂಚಿಸಿದ್ದು, ಆಗ ಆ ಬಗ್ಗೆ ಹೆಚ್ಚು ಚರ್ಚೆ ಮಾಡದೆ ಹೆಸರು ಫಿಕ್ಸ್ ಮಾಡಿದೆವು ಎಂದು ರವಿ ಕೃಷ್ಣಮೂರ್ತಿ ಹೇಳಿದ್ದಾರೆ.

ರಚಿನ್ ಹೆಸರು ಉಚ್ಚರಿಸಲು ಚೆನ್ನಾಗಿದೆ ಮತ್ತು ಚಿಕ್ಕದಾಗಿರುವುದರಿಂದ ಅದನ್ನು ಇಡಲು ನಿರ್ಧರಿಸಿದೆ, ಆದರೆ ಕೆಲವು ವರ್ಷಗಳ ನಂತರ ಅದು ರಾಹುಲ್ ಮತ್ತು ಸಚಿನ್ ಹೆಸರುಗಳ ಮಿಶ್ರಣವಾಗಿರುವುದು ಅವರ ಗಮನಕ್ಕೆ ಬಂತು. ತಾವು ಮಗನನ್ನು ಕ್ರಿಕೆಟಿಗನನ್ನಾಗಿ ಮಾಡುವ ಉದ್ದೇಶದಿಂದ ಹೆಸರಿಟ್ಟಿಲ್ಲ ಎಂದರು.

ಈ ಬಾರಿಯ ವಿಶ್ವಕಪ್ ಪಂದ್ಯದಲ್ಲಿ 9 ಇನ್ನಿಂಗ್ಸ್ ಆಡಿರುವ ರಚಿನ್ ಒಟ್ಟು 565 ರನ್ ಗಳಿಸಿದ್ದಾರೆ. ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್‌ ಮಾಡಿದ ಸ್ಕೋರರ್‌ ಅಗಿ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಅವರ ಇನ್ನಿಂಗ್ಸ್‌ನಲ್ಲಿ ಮೂರು ಶತಕ ಮತ್ತು ಎರಡು ಅರ್ಧ ಶತಕಗಳು ಸೇರಿದ್ದವು. ಅವರು 70.62 ಸರಾಸರಿಯಲ್ಲಿ ಸ್ಕೋರ್ ಮಾಡುತ್ತಿದ್ದಾರೆ.

ವಿಷಯಗಳು: #india #karnataka #news #peepal #peepalmedia
PPeepal Media Desk

Peepal Media Desk

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು