ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿನೇಶ್ ಪೋಗಟ್ ತೂಕ ಹೆಚ್ಚಿದ ಪ್ರಕರಣ ; ನಾಳೆ ಹೊರಬರುವ ತೀರ್ಪಿನಲ್ಲಿ ಬರುವ ಸತ್ಯ ಏನು?

P

Peepal Media Desk • ಕ್ರೀಡೆ

• 1 ನಿಮಿಷದ ಓದು

ವಿನೇಶ್ ಪೋಗಟ್ ತೂಕ ಹೆಚ್ಚಿದ ಪ್ರಕರಣ ; ನಾಳೆ ಹೊರಬರುವ ತೀರ್ಪಿನಲ್ಲಿ ಬರುವ ಸತ್ಯ ಏನು?

2024 ರ ಪ್ಯಾರಿಸ್ ಒಲಿಂಪಿಕ್ಸ್ ಗೆ ಅಧಿಕೃತ ತೆರೆ ಬಿದ್ದಿದೆ. ಆದರೆ ಭಾರತದಲ್ಲಿ ಪದಕ ವಂಚಿತೆ ವಿನೇಶ್ ಪೋಗಟ್ ತೂಕ ಹೆಚ್ಚಿದ ಪ್ರಕರಣದ ಬಿಸಿ ಇನ್ನೂ ಸಹ ದೇಶಾದ್ಯಂತ ದೊಡ್ಡ ಸುದ್ದಿಯಲ್ಲಿದೆ. ಹೀಗಿರುವಾಗ ವಿನೇಶ್ ಅವರ ಮೇಲ್ಮನವಿಗೆ ಸಂಬಂಧಿಸಿದಂತೆ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ನಾಳೆ ಅಂದರೆ ಆಗಸ್ಟ್ 13 ರಂದು ತೀರ್ಪು ನೀಡಲಿದೆ ಎಂದು ತಿಳಿದು ಬಂದಿದೆ.

ವಿನೇಶ್ ಪೋಗಟ್ ಒಂದೇ ರಾತ್ರಿಯಲ್ಲಿ 2 ಕೆಜಿ ತೂಕ ಹೆಚ್ಚಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಹಿಂದೆ ಭಾರಿ ಪಿತೂರಿ ನಡೆದಿದೆ ಎಂದು ಕೆಲವರು ವಾದಿಸುತ್ತಿದ್ದರೆ, ಇನ್ನು ಕೆಲವರು ವಿನೇಶ್ ಮೇಲೆಯೇ ಬೊಟ್ಟು ಮಾಡುತ್ತಿದ್ದಾರೆ. ತನ್ನ ದೇಹ ತೂಕದ ಸಮತೋಲನ ಕಾಪಾಡಿಕೊಳ್ಳುವುದು ವಿನೇಶ್ ಗೆ ಹೆಚ್ಚು ಜವಾಬ್ದಾರಿ ಬೇಕು ಎಂದೂ ಹಲವರು ಆರೋಪಿಸಿದ್ದಾರೆ.

ಈ ನಡುವೆ ವಿನೇಶ್ ಮೇಲೆಯೇ ಆರೋಪ ಹೊರಿಸಿರುವ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು, ವಿನೇಶ್ ಫೋಗಟ್ ಕಡೆಗೆ ಬೆರಳು ತೋರಿಸಿದ್ದಾರೆ. ಅಥ್ಲೀಟ್​ಗಳು ಸ್ಪರ್ಧೆಗೆ ಬೇಕಾದ ತೂಕವನ್ನು ಕಾಪಾಡಿಕೊಳ್ಳುವುದು ಅಥ್ಲೀಟ್ ಮತ್ತು ಅವರ ತರಬೇತುದಾರರ ಜವಾಬ್ದಾರಿಯೇ ಹೊರತು ಐಒಎ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ದಿನ್ಶಾ ಪರ್ದಿವಾಲಾ ಮತ್ತು ಅವರ ತಂಡವಲ್ಲ ಎಂದು ದೂರಿದ್ದಾರೆ.

ಈಗಾಗಲೇ ಡಾ. ದಿನ್ಶಾ ಪರ್ದಿವಾಲಾ ಮೇಲೆ ಬಂದಿರುವ ಗಂಭೀರ ಆರೋಪದ ಪ್ರಕಾರ ಅವರು ಸೂಚಿಸಿದ ಆಹಾರ/ನ್ಯೂಟ್ರಿಷನ್ ಸೇವಿಸಿಯೇ ಇಷ್ಟು ವೇಗವಾಗಿ ತೂಕ ಹೆಚ್ಚಲು ಕಾರಣ ಎಂಬ ಆರೋಪ ಕೂಡ ಅವರ ಮೇಲಿದೆ. ವಾಸ್ತವದಲ್ಲಿ ಕುಸ್ತಿ, ಬಾಕ್ಸಿಂಗ್ ಮತ್ತು ಜೂಡೋದಂತಹ ಕ್ರೀಡೆಗಳಲ್ಲಿ ಸ್ಪರ್ಧಿಗಳು ತನ್ನ ತೂಕವನ್ನು ನಿಗದಿಗಿಂತ ಹೆಚ್ಚಿಸಿಕೊಳ್ಳಲು ಮತ್ತು ಕುಗ್ಗಿಸಲು ಐಒಎ ವೈದ್ಯಕೀಯ ತಂಡ ಸೂಚಿಸುವ ಆಹಾರವೇ ಮುಖ್ಯ ಕಾರಣ ಎನ್ನುವ ವಾದ ಇದೆ. ಇದೇ ಕಾರಣಕ್ಕೆ ಡಾ. ದಿನ್ಶಾ ಪರ್ದಿವಾಲಾ ಮೇಲೆ ಸ್ವತಃ ವಿನೇಶ್ ಪೋಗಟ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು, ಡಾ. ಪಾರ್ದಿವಾಲಾ ವಿರುದ್ಧ ಟೀಕಾ ಪ್ರಹಾರ ನಡೆಸುವುದು ಸ್ವೀಕಾರಾರ್ಹವಲ್ಲ. ಯಾವುದೇ ತೀರ್ಮಾನಕ್ಕೆ ಬರುವ ಮೊದಲು ಎಲ್ಲಾ ಸಂಗತಿಗಳನ್ನು ಪರಿಗಣಿಸಬೇಕು ಎಂದಿದ್ದಲ್ಲದೇ ಪದಕ ವಂಚಿತೆ ವಿನೇಶ್ ಪೋಗಟ್ ಅವರೇ ಇದರ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.

P

Peepal Media Desk

Peepal Media · ಕ್ರೀಡೆ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version