ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮಿಗಳು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೆಂಗೇರಿಯಲ್ಲಿ ಶ್ರೀಮಠ ಸ್ಥಾಪಿಸಿದ್ದ ಅವರು ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆದಿಚುಂಚನಗಿರಿಯ ಮಠಕ್ಕೆ ಪರ್ಯಾಯವಾಗಿ ಉದಯಿಸಿದ ಈ ಮಠಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರವಾದದ್ದು.
ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಹಿತಿ ತಿಳಿದ ಭಕ್ತರು ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ವಿವಿಧ ಮಠಾಧೀಶರು, ಗಣ್ಯರು, ಭಕ್ತರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು. ಶ್ರೀಗಳ ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅಂತ್ಯಕ್ರಿಯೆಯ ವಿಧಿ ವಿಧಾನ ನೆರವೇರಿಸುವರು.