ಶ್ರೀಲಂಕಾದಲ್ಲಿ (Srilanka) ‘ದಿತ್ವಾ’ ಚಂಡಮಾರುತದ (Ditva Cyclone) ಪರಿಣಾಮ ಅಕ್ಷರಶಃ ನಲುಗಿ ಹೋಗಿದ್ದು, 593ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ ಸಾಕಷ್ಟು ಹಾನಿ ಸಂಭವಿಸಿದೆ. ಇದೀಗ ಪ್ರಧಾನಿ ಮೋದಿ (Pm Modi) ಶ್ರೀಲಂಕಾಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಚಂಡಮಾರುತದ ಆರ್ಭಟಕ್ಕೆ ಶ್ರೀಲಂಕಾ ತತ್ತರಿಸಿ ಹೋಗಿದ್ದು, ಇದೀಗ ಅಧ್ಯಕ್ಷ ದಿಸ್ಸನಾಯಕೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ದಿತ್ವಾ ಚಂಡಮಾರುತದಿಂದ ಉಂಟಾದ ಜೀವಹಾನಿ ಮತ್ತು ವ್ಯಾಪಕ ವಿನಾಶ ಕುರಿತು ಸಂತಾಪ ಸೂಚಿಸಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಆಪ್ತ ಮತ್ತು ವಿಶ್ವಾಸಾರ್ಹ ಸ್ನೇಹಿತನಾಗಿ ಈ ಕಷ್ಟದ ಸಮಯದಲ್ಲಿ ಭಾರತವು ಶ್ರೀಲಂಕಾ ಮತ್ತು ಅಲ್ಲಿನ ಜನರ ಬೆಂಬಲಕ್ಕೆ ದೃಢವಾಗಿ ನಿಂತಿದೆ ಎಂದು ಬರೆದುಕೊಂಡಿದ್ದಾರೆ.