Home ರಾಜ್ಯ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಹೊಸ ಬಸ್ ಘಟಕ ಉದ್ಘಾಟಿಸಿದ ಶ್ರೀರಾಮುಲು

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಹೊಸ ಬಸ್ ಘಟಕ ಉದ್ಘಾಟಿಸಿದ ಶ್ರೀರಾಮುಲು

0

ಮಾನ್ವಿ: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಹೊಸ ಬಸ್ ಘಟಕ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಸಾರಿಗೆ ಸಚಿವ ಶ್ರೀರಾಮುಲು ಸೋಮುವಾರ ಉದ್ಘಾಟಿಸಿದ್ದಾರೆ.

ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆಯ ದೃಶ್ಯ

ಉದ್ಘಾಟನೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು ಅವರು, ಸರ್ಕಾರ ಮುಂದಿನ ನಾಲ್ಕೈದು ತಿಂಗಳಲ್ಲಿ ಹೊಸ ಬಸ್ ಗಳನ್ನು ಖರೀದಿ ಮಾಡುತ್ತಿದ್ದು, ರಾಯಚೂರು , ಬೀದರ್‍, ಕಲಬುರಗಿ ಜಿಲ್ಲೆಗಳಿಗೆ ಹೆಚ್ಚುವರಿ ಬಸ್ ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.  ಅಲ್ಲದೇ ಚಾಲಕರು ವೇತನ ಪರಿಷ್ಕರಣೆ ಕುರಿತು ಮನವಿ ಸಲ್ಲಿಸಿದ್ದು,  ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಮತ್ತು ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹಾಗೂ  ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ ಸೇರಿದಂತೆ ಸಾರಿಗೆ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

You cannot copy content of this page

Exit mobile version