ಬೆಂಗಳೂರು : ಸ್ಟಾಫ್ ಸೆಲೆಕ್ಷನ್ ಕಮಿಷನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1,340 ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ಜು. 21 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ, ಸಿವಿಲ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ವಿಷಯಗಳಲ್ಲಿ ಬಿಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 32 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
ವೇತನ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 35,400 ರೂ.-1,12,400 ರೂ. ವೇತನ ದೊರೆಯಲಿದೆ.
SSC Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ssc.gov.in/login)
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: ssc.gov.inಗೆ ಭೇಟಿ ನೀಡಿ.