Home ಸಿನಿಮಾ “ಸಪ್ತ ಸಾಗರದಾಚೆ ಎಲ್ಲೋ” ಟೈಟಲ್ ಟ್ರ್ಯಾಕ್ ಗೆ ಅಭಿಮಾನಿಗಳು ಫಿದಾ .

“ಸಪ್ತ ಸಾಗರದಾಚೆ ಎಲ್ಲೋ” ಟೈಟಲ್ ಟ್ರ್ಯಾಕ್ ಗೆ ಅಭಿಮಾನಿಗಳು ಫಿದಾ .

0

ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ” ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಹಾಗೂ ಧನಂಜಯ್ ರಂಜನ್ ಬರೆದಿರುವ ಈ ಶೀರ್ಷಿಕೆ ಗೀತೆಯನ್ನು ಕಪಿಲ್ ಕಪಿಲನ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

“ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಸೈಡ್ 1 ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದ್ದು, ಸೈಡ್ 2 ಅಕ್ಟೋಬರ್ 20ಕ್ಕೆ ತೆರೆ ಕಾಣಲಿದೆ. ಬಹು ನಿರೀಕ್ಷಿತ ಈ ಚಿತ್ರದ ಬಿಡುಗಡೆಗೆ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.


ಹೇಮಂತ್ ಎಂ ರಾವ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಚೈತ್ರ ಜೆ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯತಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನ “ಸಪ್ತ. ಸಾಗರದಾಚೆ ಎಲ್ಲೋ” ಚಿತ್ರಕ್ಕಿದೆ.

You cannot copy content of this page

Exit mobile version