ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ.
ವಿದ್ಯಾರ್ಥಿಗಳು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. SMS ಮೂಲಕವೂ ಫಲಿತಾಂಶ ಪಡೆಯಬಹುದು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam-1) ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಈಗಾಗಲೇ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ (ಮೇ.02) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
ಈ ವರ್ಷ ಇನ್ನೂ ಎರಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (ಪರೀಕ್ಷೆ-2 ಮತ್ತು ಪರೀಕ್ಷೆ-3) ನಡೆಯಲಿವೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳಿಗೆ ಇನ್ನೂ ಎರಡು ಅವಕಾಶಗಳಿವೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ.