ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಡೆಯಿಂದ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಮಾಮೂಲಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿಯ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಬಂದಿದ್ದು, ಕಲಬುರಗಿ ಜಿಲ್ಲೆ ರಾಜ್ಯದಲ್ಲಿಯೇ ಕೊನೆಯ ಸ್ಥಾನ ಆಗಿದೆ.
ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆದಿದ್ದರು.
ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಇಂದು ಮಧ್ಯಾಹ್ನ 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.