Home ಶಿಕ್ಷಣ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ : ಸಚಿವ ಮಧು ಬಂಗಾರಪ್ಪ ಘೋಷಣೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ : ಸಚಿವ ಮಧು ಬಂಗಾರಪ್ಪ ಘೋಷಣೆ

0

ಬೆಂಗಳೂರು, ಏಪ್ರಿಲ್ 23: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ತಿಳಿಸಿದ್ದಾರೆ.

ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಬವಾಗಬಹುದು ಎಂಬ ಆತಂಕ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆವರಿಸಿತ್ತು. ಆದರೆ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದ ಬಳಿಕ, “ಯಾವುದೇ ತಾಂತ್ರಿಕ ಅಡ್ಡಿಯಿಲ್ಲದೆ ನಿಗದಿತ ಸಮಯಕ್ಕೆ ಫಲಿತಾಂಶ ಪ್ರಕಟಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ. ಪರೀಕ್ಷಾ ಮಂಡಳಿಯು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಪ್ರಕಟಣೆಗೆ ಯಾವುದೇ ಅಡಚಣೆಯಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?
ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು karresults.nic.in ಅಥವಾ kseab.karnataka.gov.in ಅಧಿಕೃತ ವೆಬ್‌ಸೈಟ್‌ಗಳಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಲ್ಲದೆ, DigiLocker ಮತ್ತು KarnatakaOne ಅಪ್ಲಿಕೇಶನ್ ಮೂಲಕವೂ ಫಲಿತಾಂಶ ಪಡೆಯಬಹುದಾಗಿದೆ.

ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮೂಲಗಳನ್ನು ಮಾತ್ರ ಅವಲಂಬಿಸುವಂತೆ ಪರೀಕ್ಷಾ ಮಂಡಳಿ ಮನವಿ ಮಾಡಿದೆ.

You cannot copy content of this page

Exit mobile version