ಬೆಂಗಳೂರು : ಈಗಾಗಲೇ ಪತಂಜಲಿ ಉತ್ಪನ್ನಗಳ ಜಾಹೀರಾತು ವಿಚಾರಗಳಲ್ಲಿ ಸುಪ್ರೀಂ ಕೋರ್ಟ್ ಬಾಬಾ ರಾಮ್‌ದೇವ್ ವಿರುದ್ಧ ಗರಂ ಆಗಿದ್ದು ಈಗ ಕರ್ನಾಟಕ ಸರ್ಕಾರ ಕೂಡ ಪತಂಜಲಿ ವಿರುದ್ಧ ಸಮರ ಸಾರಿದೆ.
ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು ‘ಪತಂಜಲಿ ಸಂಸ್ಥೆ ಯಾವುದೇ ಪುರಾವೆ ನೀಡದೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಅವರು ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ದತಿಗೆ ವಂಚನೆ ಮಾಡುತ್ತಿದ್ದಾರೆ. ದುಡ್ಡು ಮಾಡಿಕೊಳ್ಳಳು ಜನರಿಗೆ ಮೋಸ ಮಾಡುತ್ತಿದ್ದಾರೆ. ಹೀಗಾಗಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಡ್ರಗ್ ಕಂಟ್ರೋಲ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ‘ ಎಂದು ಸಚಿವ ಗುಂಡೂರಾವ್ ಹೇಳಿದರು.
ನಿನ್ನೆ ಸುಪ್ರೀಂ ಕೋರ್ಟ್ ಬಾಬಾ ರಾಮ್ ದೇವ್ ಅವರ ಜೊತೆಯಲ್ಲೇ ಉತ್ತರಖಂಡದ ಸರ್ಕಾರವನ್ನೂ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದಿರುವುದಕ್ಕೆ ತರಾಟೆಗೆ ತೆಗೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು