BREAKING NEWS : ಮಾರ್ಚ್ 7 ಕ್ಕೆ ರಾಜ್ಯ ಬಜೆಟ್ ಮಂಡನೆ ; ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಗೆ ಹೆಚ್ಚಿದೆ ನಿರೀಕ್ಷೆ

ಮಾ. 3 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾ.7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ರೈತ ಮುಖಂಡರು ಮತ್ತು ಆರ್ಥಿಕ ತಜ್ಞರ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮುಖ್ಯಮಂತ್ರಿ ಮಾತನಾಡಿದರು. ಮಾ. 3 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾ.7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ವಿವಿಧ ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿದ್ದಾರೆ. ತಮ್ಮ ದಾಖಲೆಯ 16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಬಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

Related Articles

ಇತ್ತೀಚಿನ ಸುದ್ದಿಗಳು