Monday, May 5, 2025

ಸತ್ಯ | ನ್ಯಾಯ |ಧರ್ಮ

ಪರಿಶಿಷ್ಟ ಜಾತಿಗಳ ಸಮೀಕ್ಷೆ-2025ರ ಕುರಿತಂತೆ ರಾಜ್ಯ ಸರ್ಕಾರ ಸಹಾಯವಾಣಿ ಆರಂಭ

ಬೆಂಗಳೂರು : ಇಂದಿನಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಕುರಿತಂತೆ ರಾಜ್ಯ ಸರ್ಕಾರ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಿದೆ.

ಸಮಾಜ ಕಲ್ಯಾಣ ಇಲಾಖೆ- ಕಂಟ್ರೋಲ್‌ ರೂಂ – 9482300400 ಹಾಗೂ ಜಸ್ಟಿಸ್‌ ನಾಗಮೋಹನ ದಾಸ್‌ ಆಯೋಗ (ಒಳ ಮೀಸಲಾತಿ ಕುರಿತು) – 9481359000 ಕ್ಕೆ ಸಂಪರ್ಕಿಸಬಹುದಾಗಿದೆ. ಈ ಸಹಾಯವಾಣಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯೂ ಲಭ್ಯವಿರಲಿದೆ ಎಂದು ಸರ್ಕಾರ ತಿಳಿಸಿದೆ.

ಇನ್ನು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಮಾಹಿತಿಯನ್ನು ವೈಜ್ಞಾನಿಕವಾಗಿ ಕಡಿಮೆ ಅವಧಿಯಲ್ಲಿ ಪಡೆಯುವ ಉದ್ದೇಶದಿಂದ ಇ-ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ಮೊಬೈಲ್‌ ಆ್ಯಪ್ ಮೂಲಕ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ಮೊಬೈಲ್‌ ಆ್ಯಪ್ ಅನ್ನು ಬೆಳಗ್ಗೆ 6.30 ರಿಂದ ಸಂಜೆ 6.30ರ ವರೆಗೆ ಎನೇಬಲ್‌ ಮಾಡಲಾಗಿರುತ್ತದೆ. ಈ ಅವಧಿಯಲ್ಲಿ ಗಣತಿದಾರರು ಮನೆಗಳಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರು, ಕುಟುಂಬದವರು ತಮ್ಮ ಜಾತಿಯ ಕುರಿತು ಮಾಹಿತಿಯನ್ನು ನೀಡಬೇಕು.

ಮನೆ-ಮನೆ ಸಮೀಕ್ಷೆ ಕೈಗೊಂಡ ಸಂದರ್ಭದಲ್ಲಿ ಮಾಹಿತಿ ಒದಗಿಸಲು ಸಾಧ್ಯವಾಗದೇ ಇರುವ ಪರಿಶಿಷ್ಟ ಜಾತಿಯ ಕುಟುಂಬದವರು ಸ್ವಯಂ ಪ್ರೇರಿತರಾಗಿ ವಿಶೇಷ ಶಿಬಿರಗಳಲ್ಲಿ ಭಾಗವಹಿಸಿ ಮಾಹಿತಿಯನ್ನು ಒದಗಿಸಲು ಅವಕಾಶವಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page