ಪೋಕ್ಸೋ ಪ್ರಕರಣ : ಹೊಸ ತನಿಖಾಧಿಕಾರಿ ನೇಮಿಸಿದ ರಾಜ್ಯ ಸರ್ಕಾರ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯಾಗಿ ಪುನೀತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

17 ವರ್ಷದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.

ಈ ಪ್ರಕರಣದಲ್ಲಿ ಸಿಐಡಿ ಡಿವೈಎಸ್ಪಿ ಪುನೀತ್ ಅವರು ಬಿಎಸ್ ಯಡಿಯೂರಪ್ಪ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಇಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು