Friday, August 16, 2024

ಸತ್ಯ | ನ್ಯಾಯ |ಧರ್ಮ

ಎಲ್ಲಾ ಸರ್ಕಾರಿ ನೌಕರರಿಗೂ ‘ಕನ್ನಡ ಟ್ಯಾಗ್’ ಗುರುತಿನ ಕಾರ್ಡ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

“ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (tag) ಧರಿಸಿ ದೈನಂದಿನ ಕೆಲಸಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

“ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ”

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು (Tag) ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ಆದೇಶಿಸಿದೆ

ಕೆಲವು ವರ್ಷಗಳಿಂದ ಹಲವು ಕನ್ನಡ ಪರ ಸಂಘಟನೆಗಳು ಈ ಬಗ್ಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಆದೇಶ ಪ್ರಾಮುಖ್ಯತೆ ಪಡೆದುಕೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page