Thursday, August 15, 2024

ಸತ್ಯ | ನ್ಯಾಯ |ಧರ್ಮ

ಎಸ್’ಬಿಐ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಜೊತೆಗಿನ ವ್ಯವಹಾರ ಅಂತ್ಯಗೊಳಿಸಿದ ರಾಜ್ಯ ಸರ್ಕಾರ

ಸರ್ಕಾರದ ಹಣ ದುರುಪಯೋಗ ಮತ್ತು ಅಕ್ರಮ ವಹಿವಾಟಿನ ಆರೋಪಗಳ ಕಾರಣಕ್ಕೆ ಎಸ್.ಬಿ.ಐ ಮತ್ತು ಪಂಜಾಜ್ ನ್ಯಾಷನಲ್ ಬ್ಯಾಂಕ್ ನ ಎಲ್ಲಾ ವ್ಯವಹಾರಗಳಿಂದ ರಾಜ್ಯ ಸರ್ಕಾರ ಹೊರಬರುವ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿರುವ ಮತ್ತು ಹಣಕಾಸು ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ ಈ ಬ್ಯಾಂಕ್‌ಗಳಲ್ಲಿನ ಖಾತೆಗಳನ್ನು ಮುಚ್ಚಲು ಮತ್ತು ಠೇವಣಿಗಳನ್ನು ತಕ್ಷಣವೇ ಮರುಪಡೆಯಲು ರಾಜ್ಯದ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಇತರ ಸಂಸ್ಥೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ತಕ್ಷಣವೇ ಮುಕ್ತಾಯಗೊಳಿಸಬೇಕು. ಈ ಬ್ಯಾಂಕ್‌ಗಳಲ್ಲಿ ಯಾವುದೇ ಹೆಚ್ಚಿನ ಠೇವಣಿ ಅಥವಾ ಹೂಡಿಕೆಗಳನ್ನು ಮಾಡಬಾರದು ಎಂದು ತಿಳಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page