ಬೆಂಗಳೂರು: ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣದ ʼಜನಸ್ಪಂದನʼ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ರಾಜ್ಯ ಸಮೃದ್ಧವಾಗಿರುತ್ತದೆ. ಇದಕ್ಕೆ ಉದಾಹರಣೆ ಇಡೀ ರಾಜ್ಯದ ಉದ್ದಗಲಕ್ಕೂ ಮಳೆಯಾಗಿದೆ ಮತ್ತು ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಆದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾದಲ್ಲಿದ್ದಾಗ ರಾಜ್ಯವು ಬರಡಾಗಿ ಹೋಗಿತ್ತು ಎಂದು ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ವ್ಯಂಗ್ಯವಾಡಿದರು.
ಭಾರತ್ ಜೋಡೋ ಯಾತ್ರೆ ಕುರಿತು ಮಾತನಾಡಿದ ಅವರು, ಅಂದು ತುಕ್ಡೇ ಗ್ಯಾಂಗ್‌ನ ಮುಖಂಡರಿಗೆ ರಕ್ಷಣೆ ನೀಡಿದ ಕಾಂಗ್ರೆಸ್ ಪಕ್ಷ ಇಂದು ಅವರೊಂದಿಗೆ ಭಾರತ್ ಜೋಡೋ ಯಾತ್ರೆ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ತುಕ್ಡೇ ಗ್ಯಾಂಗಿಗೆ ಬಿರಿಯಾನಿ ನೀಡಿತು, ನಾವು ಸರ್ಜಿಕಲ್ ಸ್ಟ್ರೈಕ್ ಮೂಲಕ ಉತ್ತರ ನೀಡಿದ್ದೇವೆ ಎಂದು ಗುಡಿಗಿದರು.