Monday, June 30, 2025

ಸತ್ಯ | ನ್ಯಾಯ |ಧರ್ಮ

ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ ; ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ‘ಸ್ಟೆಮಿ’ ಯೋಜನೆ ವಿಸ್ತರಣೆ

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಯಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕು ಕೇಂದ್ರಗಳಿಗೂ ಸ್ಟೆಮಿ ಯೋಜನೆ ವಿಸ್ತರಣೆಗೆ ನಿರ್ಧರಿಸಿರುವುದಾಗಿ ಆರೋಗ್ಯ ಇಲಾಖೆ ನಿರ್ಧರಿಸಿದೆ.

ಈ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದು ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಮುಂದಿನ ವರ್ಷದೊಳಗೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಸ್ಟೆಮಿ ಯೋಜನೆ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ರಾಜ್ಯಾಧ್ಯಂತ ವಿಸ್ತರಿಸುತ್ತಿರುವಂತ ಸ್ಟೆಮಿ ಯೋಜನೆ ಅಂದರೆ ಹಬ್ ಆಂಡ್ ಸ್ಟೋಕ್ ಮಾಡೆಲ್ ಎಂಬುದಾಗಿದೆ. ಈ ಯೋಜನೆಯ ಅಡಿಯಲ್ಲಿ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ವೈದ್ಯಕೀಯ ನೆರವು ಸಿಗಲಿದೆ. ಆ ಮೂಲಕ ಪ್ರಾಣಾಪಾಯದಿಂದ ಹೃದಯಾಘಾತಕ್ಕೆ ಒಳಗಾದವರನ್ನು ಪಾರು ಮಾಡುವಂತ ಚಿಕಿತ್ಸಾ ವಿಧಾನ ಇದಾಗಿದೆ.

ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ನೀಡಿದ ಮಾಹಿತಿಯಂತೆ ಈ ಮೊದಲು 86 ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ ಯೋಜನೆ ಇತ್ತು. ಮುಂದಿನ ವರ್ಷದೊಳಗೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಯೋಜನೆ ಆರಂಭಗೊಳ್ಳಲಿದೆ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page