Thursday, September 12, 2024

ಸತ್ಯ | ನ್ಯಾಯ |ಧರ್ಮ

ಮಂಡ್ಯ ಕೋಮು ಗಲಭೆ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 6 ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ.

ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಆಗಿರುವ ಗಲಭೆ ಕೋಮುಗಲಭೆಯಲ್ಲ. ಯಾರೋ ಕಿಡಿಗೆಡಿಗಳು ಗಲಾಟೆ ನಡೆಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page