Thursday, September 11, 2025

ಸತ್ಯ | ನ್ಯಾಯ |ಧರ್ಮ

ತ್ರಿಪುರಾ ಶಿಕ್ಷಣ ಸಂಸ್ಥೆಗಳಲ್ಲಿ ಎಚ್‌ಐವಿ ಹಾವಳಿ: 47 ವಿದ್ಯಾರ್ಥಿಗಳು ಸಾವು

ತ್ರಿಪುರಾ ರಾಜ್ಯದಲ್ಲಿ ಎಚ್‌ಐವಿ ಸೋಂಕು ಸುದ್ದಿಯಲ್ಲಿದೆ. ಈ ಕಾಯಿಲೆಯಿಂದ 47 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಹಿರಿಯ ಅಧಿಕಾರಿಯೊಬ್ಬರು ಇತ್ತೀಚೆಗೆ ಸುಮಾರು 828 ವಿದ್ಯಾರ್ಥಿಗಳಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ ಎಂದು ಹೇಳಿದ್ದಾರೆ. 828 ಎಚ್‌ಐವಿ ಪಾಸಿಟಿವ್ ವಿದ್ಯಾರ್ಥಿಗಳ ಪೈಕಿ 572 ಮಂದಿ ಜೀವಂತವಾಗಿದ್ದಾರೆ ಎಂದು ಹೇಳಲಾಗಿದೆ. ಪ್ರತಿದಿನ 5ರಿಂದ 7 ಹೊಸ ಪ್ರಕರಣಗಳು ದಾಖಲಾಗುತ್ತಿರುವುದು ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಒಟ್ಟು 5,674 ಮಂದಿ ಎಚ್‌ಐವಿ ಪೀಡಿತರಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇವರಲ್ಲಿ 4,570 ಪುರುಷರು, 1,103 ಮಹಿಳೆಯರು ಮತ್ತು ಒಬ್ಬರು ತೃತೀಯಲಿಂಗಿ. ಎಚ್ ಐವಿ ಪ್ರಕರಣಗಳು ಹೆಚ್ಚಾಗಲು ಮಾದಕ ದ್ರವ್ಯ ಸೇವನೆಯೇ ಕಾರಣ ಎಂದು ಅವರು ಹೇಳಿದರು. ಇದುವರೆಗೆ ರಾಜ್ಯಾದ್ಯಂತ 220 ಶಾಲೆ, 24 ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಡ್ರಗ್ಸ್ ಚುಚ್ಚುಮದ್ದು ತೆಗೆದುಕೊಳ್ಳುತ್ತಿರುವುದು ಪತ್ತೆಯಾಗಿದೆ.

ತ್ರಿಪುರಾ ಜರ್ನಲಿಸ್ಟ್ ಯೂನಿಯನ್, ವೆಬ್ ಮೀಡಿಯಾ ಫೋರಮ್ ಮತ್ತು ಟಿಎಸ್‌ಎಸಿಎಸ್ ಇತ್ತೀಚೆಗೆ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಟಿಎಸ್‌ಎಸಿಎಸ್‌ನ ಜಂಟಿ ನಿರ್ದೇಶಕರು, ‘ಇದುವರೆಗೆ 828 ಎಚ್‌ಐವಿ ಪೀಡಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 572 ವಿದ್ಯಾರ್ಥಿಗಳು ಜೀವಂತವಾಗಿದ್ದಾರೆ. ಈ ಸೋಂಕಿನಿಂದ 47 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ತ್ರಿಪುರಾದಿಂದ ಹೊರಗಿರುವ ಪ್ರತಿಷ್ಠಿತ ಸಂಸ್ಥೆಗಳಿಗೆ ವಲಸೆ ಹೋಗಿದ್ದಾರೆ. ಇಲ್ಲಿಯವರೆಗೆ 220 ಶಾಲೆಗಳು, 24 ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸುತ್ತಿರುವುದು ಕಂಡುಬಂದಿದೆ. ರಾಜ್ಯಾದ್ಯಂತ ಒಟ್ಟು 164 ಆರೋಗ್ಯ ಕೇಂದ್ರಗಳಿಂದ ನಾವು ಈ ಡೇಟಾವನ್ನು ಸಂಗ್ರಹಿಸಿದ್ದೇವೆ ಎಂದು ಅವರು ವಿವರಿಸಿದರು.

ಇನ್ನೂ ಬಾಳಿ ಬದುಕಬೇಕಿದ್ದ ಯುವಜನರು ಇಂತಹ ಕಾಯಿಲೆಗೆ ಮತ್ತು ದುಶ್ಚಟಕ್ಕೆ ಬಲಿಯಾಗುತ್ತಿರುವುದನ್ನು ಪೋಷಕರು ಅಸಹಾಯಕರಾಗಿ ನೋಡುತ್ತಿದ್ದಾರೆ. ಸರ್ಕಾರ ಡ್ರಗ್ಸ್‌ ಜಾಲದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page