ಬ್ರೇಕ್ ಫೈಲಾಗಿ ಕಾರು ಪಲ್ಟಿ- ವಿದ್ಯಾರ್ಥಿಗಳು, ಚಾಲಕ ಗಾಯ

ಬಂಟ್ವಾಳ: ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದ ವಿಟ್ಲದ ಮುಚ್ಚಿರಹದವು ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಮತ್ತು ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದುಕೊಂಡು ಹೋಗುತ್ತಿದ್ದ ಸಂದರ್ಬದಲ್ಲಿ ಅಪಘಾತ ನಡೆದಿದೆ. ಬ್ರೇಕ್ ಫೇಲಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಮಧ್ಯೆಯೇ ಮಗುಚಿ ಬಿದ್ದಿದೆ. ಚಾಲಕ ಮುಳಿಯ ರಾಮಣ್ಣ ಎಂಬವರ ತಲೆಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು