Friday, May 3, 2024

ಸತ್ಯ | ನ್ಯಾಯ |ಧರ್ಮ

ಸುರಿವ ಮಳೆಯನ್ನೂ ಲೆಕ್ಕಿಸದೇ ಕುವೆಂಪು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ : ಸುರಿವ ಮಳೆಯನ್ನೂ ಲೆಕ್ಕಿಸದೆ ವಿಧ್ಯಾರ್ಥಿಗಳ ಪ್ರತಿಭಟನೆಗೆ ಸಾಕ್ಷಿಯಾಗಿದ್ದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದಲ್ಲಿ. ವಿಧ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತರಗತಿಗಳನ್ನು ಬಹಿಷ್ಕರಿಸಿ ವಿಶ್ವವಿದ್ಯಾಲಯದ ಆಡಳಿತ ಕಚೇರಿವರೆಗೆ ಮೆರವಣಿಗೆಯ ಮೂಲಕ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ವೇತನದಲ್ಲಿ ಆಗಿರುವ ದೋಷ, ತಾಂತ್ರಿಕ ತೊಂದರೆ, ದುಬಾರಿ ವೇತನ ಸೇರಿದಂತೆ ಪ್ರಮುಖ ವಿಚಾರಗಳ ಅಡಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ಪ್ರತಿಭಟನೆ ನಡೆಸಿದರು. ಈ ಬಗ್ಗೆ ಹಿಂದಿನ ಬಾರಿಯೂ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಕಂಡುಬರದ ಹಿನ್ನೆಲೆಯಲ್ಲಿ ಈ ಬಾರಿಯಾದರೂ ಆಗಿರುವ ತೊಂದರೆ ಸರಿಪಡಿಸುವಂತೆ ಪ್ರತಿಭಟನೆ ಮೂಲಕ ಕುಲಪತಿಗಳಿಗೆ ಮನವಿ ಸಲ್ಲಿಸಿದರು.

ಬೇಡಿಕೆ 1 : ವಿದ್ಯಾರ್ಥಿ ವೇತನದ ವ್ಯವಸ್ಥೆಯಲ್ಲಿ ಹಲವು ದೋಷಗಳಾಗಿವೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು UUCMS ವಿಳಂಬ ಮಾಡಿದೆ. ಇದರ ಸಮಸ್ಯೆ ಕಳೆದ ಬಾರಿಯೂ ಇದ್ದರೂ ಅದನ್ನು ಸರಿಪಡಿಸಿಲ್ಲ.
ಬೇಡಿಕೆ 2 : ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಇದನ್ನು ಕೂಡಲೆ ಪರಿಹರಿಸಬೇಕು ಎಂದು ವಿದ್ಯಾರ್ಥಿಗಳು (Students) ಆಗ್ರಹಿಸಿದರು.
ಬೇಡಿಕೆ 3 : ಸೆಮಿಸ್ಟರ್‌ ಪರೀಕ್ಷೆಯ ಶುಲ್ಕ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ಶುಲ್ಕವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಹೊರೆಯನ್ನು ತಗ್ಗಿಸಬೇಕು ಎಂದು ಆಗ್ರಹಿಸಿದರು.

Related Articles

ಇತ್ತೀಚಿನ ಸುದ್ದಿಗಳು