Home ಜನ-ಗಣ-ಮನ ಕ್ಯಾಂಪಸ್ ಕನ್ನಡಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಬೀಳುತ್ತೆ ಎಫ್ಐಆರ್; ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಬೀಳುತ್ತೆ ಎಫ್ಐಆರ್; ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ

0

ಇತ್ತೀಚಿನ ದಿನಗಳಲ್ಲಿ ಶಾಲೆಯ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣ ಹೆಚ್ಚು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ. ಇನ್ನು ಮುಂದೆ ಈ ಪ್ರಕರಣ ಕಂಡುಬಂದರೆ ಮುಲಾಜಿಲ್ಲದೆ ಅಧಿಕಾರಿಗಳು ಮತ್ತು ಶಾಲಾ ಮುಖ್ಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವ ಸೂಚನೆ ನೀಡಲಾಗಿದೆ.

ಈ ರೀತಿಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಇಲಾಖೆಯು ಒಂದು ವೇಳೆ ಮುಂದಿನ ದಿನಗಳಲ್ಲಿ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರು ಮತ್ತು ಇಲಾಖಾ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸಲಾಗುವುದು ಎಂಬ ಎಚ್ಚರಿಕೆ ನೀಡಿದೆ.

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಮಾಡಿಸಬಾರದು ಎಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಮುಖ್ಯ ಶಿಕ್ಷಕರಿಗೆ ಕಡ್ಡಾಯವಾಗಿ ಸೂಚನೆ ನೀಡಲಾಗಿದೆ. ಈ ಸಂಬಂಧ ಹಲವು ಬಾರಿ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಆದರೂ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.

ಸರ್ಕಾರ ಮತ್ತು ಇಲಾಖೆಯು ಕಾಲಕಾಲಕ್ಕೆ ಹೊರಡಿಸಲಾದ ಸೂಚನೆಗಳು ಹಾಗೂ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಆದೇಶಿಸಲಾಗಿದೆ. ಆದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಆಕ್ಷೇಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತಹವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು. ಅಲ್ಲದೆ, ಪ್ರಥಮ ವರ್ತಮಾನ ವರದಿ (ಎಐಆರ್) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಶಾಲೆಯ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಾರಸು ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ ಎಚ್ಚರಿಕೆ ನೀಡಿದ್ದಾರೆ.

You cannot copy content of this page

Exit mobile version