ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ; ಸರ್ಕಾರದ ನಿಲುವನ್ನು ಪ್ರಶ್ನಿಸಿ ಸು.ಕೋರ್ಟ್ ನೋಟಿಸ್

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ವಾಪಸ್ ಪಡೆದಿದ್ದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕರ್ನಾಟಕ​​ ​ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತ್ಯೇಕವಾಗಿ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​​ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಯತ್ನಾಳ್ ಹಾಗೂ ಸಿಬಿಐ ಅಧಿಕಾರಿಗಳು ಕರ್ನಾಟಕ ಹೈಕೋರ್ಟ್​​​​​ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ಕೇಂದ್ರ ಸಂಸ್ಥೆಯೊಂದು ಈ ಪ್ರಕರಣದಲ್ಲಿ ಭಾಗಿಯಾಗಿದೆ. ಇದು ಕೇಂದ್ರ-ರಾಜ್ಯಕ್ಕೆ ಸಂಬಂಧಿಸಿದ ವ್ಯಾಜ್ಯ. ಹೀಗಾಗಿ ಮನವಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳುವ ಮೂಲಕ ಈ ಹಿಂದೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು.

ಈ ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸಿ ಯತ್ನಾಳ್ ಮತ್ತು ಸಿಬಿಐ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ. ಹಾಗೆಯೇ ನಿಗದಿತ ದಿನದೊಳಗೆ ಸುಪ್ರೀಂಕೋರ್ಟ್ ಗೆ ಉತ್ತರಿಸಲು ಆದೇಶಿಸಿದೆ.

Related Articles

ಇತ್ತೀಚಿನ ಸುದ್ದಿಗಳು