Monday, June 17, 2024

ಸತ್ಯ | ನ್ಯಾಯ |ಧರ್ಮ

ಧಾರ್ಮಿಕ ಸಂಸ್ಥೆಗಳನ್ನು ಮುಕ್ತಗೊಳಿಸಲು ಸ್ಟಾಲಿನ್ ಗೆ ಸುಬ್ರಮಣಿಯನ್ ಸ್ವಾಮಿ ಮನವಿ

ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಲ್ಲಾ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ಮಾಜಿ ಸಂಸದರಾದ ಸುಬ್ರಮಣಿಯನ್ ಸ್ವಾಮಿಯವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಪತ್ರದಲ್ಲಿ, ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳನ್ನು ಹಲವು ವರ್ಷಗಳಿಂದ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿ ಇಡುವುದು ಭಾರತ ಸಂವಿಧಾನದ 25 ಮತ್ತು 26 ನೇ ವಿಧಿಗೆ ವಿರುದ್ಧವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಒತ್ತಿ ಹೇಳಿದ್ದಾರೆ.

ನಾನು ಸುಪ್ರೀಂ ಕೋರ್ಟ್‌ನಲ್ಲಿ ಹೂಡಿದ್ದ ಪ್ರಕರಣವೊಂದರಲ್ಲಿ ತಮಿಳುನಾಡು ಸರ್ಕಾರ ಪ್ರತಿವಾದಿಯಾಗಿತ್ತು. 2014ರಲ್ಲಿ ಆ ಪ್ರಕರಣದ ತೀರ್ಪು ಹೊರಬಿದ್ದಿದ್ದು, ‘ದೇವಸ್ಥಾನಗಳಲ್ಲಿ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಾರದು. ದೇವಸ್ಥಾನಗಳಲ್ಲಿ ಹಣಕಾಸಿನ ಅವ್ಯವಹಾರಗಳು, ಹಣಕಾಸಿನ ಸಮಸ್ಯೆಗಳು ಕಂಡುಬಂದರೆ, ಅವುಗಳನ್ನು ಪರಿಹರಿಸಲು ಸರ್ಕಾರವು ನಿರ್ದಿಷ್ಟ ಅವಧಿಯವರೆಗೆ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತದೆ ಎಂದು ಹೇಳಲಾಗಿದೆ.

ಅದರಂತೆ, ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸಿ, ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ತಮಿಳುನಾಡು ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇನೆ ಎಂದೂ ಸಹ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ನಿಟ್ಟಿನಲ್ಲಿ ನಾನು ಈ ತೀರ್ಪಿನ ಪ್ಯಾರಾಗ್ರಾಫ್ ಸಂಖ್ಯೆ 64, 65, 66, 67 ಮತ್ತು 68 ರಲ್ಲಿ ಉಲ್ಲೇಖಿಸಿದ ಪ್ರಮುಖ ಅಂಶಗಳನ್ನು ಇಟ್ಟು ನಿಮ್ಮ ಗಮನವನ್ನು ಸೆಳೆಯುತ್ತೇನೆ. ಇದು ಇಲ್ಲಿನ ಸಮಸ್ಯೆಯನ್ನು ಸಾಕಷ್ಟು ಸ್ಪಷ್ಟತೆಯೊಂದಿಗೆ ಬಗೆಹರಿಸುತ್ತದೆ ಎಂದು ಸುಬ್ರಮಣಿಯನ್ ಸ್ವಾಮಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

2014 ರಲ್ಲಿ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ತಮಿಳುನಾಡಿನ ಪ್ರಸಿದ್ಧ ನಟರಾಜ ದೇವಾಲಯವನ್ನು ರಾಜ್ಯದ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ಆದೇಶಿಸಿತ್ತು. ದೇವಸ್ಥಾನದ ಆಡಳಿತವನ್ನು ಅರ್ಚಕರೇ ಮಾಡಬೇಕೇ ಹೊರತು ಸರ್ಕಾರ ಇದರ ನಡುವೆ ಬರಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.

ಈ ಕುರಿತು ಸುಬ್ರಮಣಿಯನ್ ಸ್ವಾಮಿ ಅವರು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ಬರೆದ ಪತ್ರವನ್ನು ಟ್ವೀಟ್ ಮಾಡಿ “ಸಿಎಂ ಈ ವಿಷಯದಲ್ಲಿ ಸಂವಿಧಾನದ ಪ್ರಕಾರ ಮತ್ತು ನಟರಾಜ ದೇವಸ್ಥಾನದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು” ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು