ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದಾಗಿ ತಲೆದಂಡ ಕಾರ್ಯ ಶುರುವಾಗಿದೆ. ಈಗಾಗಲೇ 100 ಕ್ಕೂ ಹೆಚ್ಚು ಗಲಭೆಕೋರರನ್ನು ವಶಕ್ಕೆ ಪಡೆದುಕೊಂಡ ಬಳಿಕ ಮಂಡ್ಯ ಹೆಚ್ಚುವರಿ ಎಸ್ಪಿ -1 ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.
ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಾಗ ತೋರಿಸದೆ ತಿಮ್ಮಯ್ಯ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಅವರ ಡಿಢೀರ್ ವರ್ಗಾವಣೆ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಈ ವರ್ಗಾವಣೆಯು ಮದ್ದೂರಿನ ಗಲಭೆಯ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚೆಗೆ ಕಾರಣವಾಗಿದೆ. ನವೀನ್ ಕುಮಾರ್ ಅವರು ತಕ್ಷಣವೇ ಮಂಡ್ಯ ಜಿಲ್ಲೆಯ ಹೆಚ್ಚುವರಿ ಎಸ್‌ಪಿ-1 ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.