Home ಬ್ರೇಕಿಂಗ್ ಸುದ್ದಿ ನಟ ಕಿಚ್ಚ ಸುದೀಪ್ ಹಾಗೂ ಚಕ್ರವರ್ತಿ ಚಂದ್ರಚೂಡ ವಿರುದ್ಧ ವಂಚನೆ ಆರೋಪ: ಕಾಫಿ ತೋಟದ ಮಾಲೀಕ...

ನಟ ಕಿಚ್ಚ ಸುದೀಪ್ ಹಾಗೂ ಚಕ್ರವರ್ತಿ ಚಂದ್ರಚೂಡ ವಿರುದ್ಧ ವಂಚನೆ ಆರೋಪ: ಕಾಫಿ ತೋಟದ ಮಾಲೀಕ ದೂರು

0

ಬೆಂಗಳೂರು: ನಟ ಕಿಚ್ಚ ಸುದೀಪ್ ಹಾಗೂ ಚಕ್ರವರ್ತಿ ಚಂದ್ರಚೂಡ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಕಾಫಿ ತೋಟದ ಮಾಲೀಕ ದೀಪಕ್ ಮಯೂರ್ ಎಂಬವರು ಇಬ್ಬರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ವಾರಸ್ಥಾ ಎಂಬ ಧಾರವಾಹಿ ಚಿತ್ರೀಕರಣಕ್ಕಾಗಿ ತಮ್ಮ ಕಾಫಿ ತೋಟವನ್ನು ಬಳಸಿಕೊಳ್ಳಲು ಎರಡು ವರ್ಷಗಳ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಚಿತ್ರೀಕರಣದ ವೇಳೆ ತೋಟದಲ್ಲಿನ ಮರಗಳು ಹಾಗೂ ಆಸ್ತಿಗೆ ಹಾನಿಯಾಗಿದೆ ಎಂದು ದೀಪಕ್ ಆರೋಪಿಸಿದ್ದಾರೆ. ಇದಕ್ಕಾಗಿ ಅವರು 95 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಕ್ರಮಕ್ಕೆ ಮುಂದಾಗಿದ್ದರು ಎನ್ನಲಾಗಿದೆ.

ಈ ಪ್ರಕರಣವನ್ನು ವಾಪಸ್ ಪಡೆಯುವಂತೆ ನಟ ಕಿಚ್ಚ ಸುದೀಪ್ ಅವರು 60 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದರು ಎಂದು ದೀಪಕ್ ಆರೋಪಿಸಿದ್ದಾರೆ. ಆದರೆ ಕೇಸ್ ವಾಪಸ್ ಪಡೆದ ಬಳಿಕ ಭರವಸೆ ನೀಡಿದ ಹಣವನ್ನು ನೀಡದೇ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜನವರಿ 16ರಂದು ದೀಪಕ್ ಮಯೂರ್ ಅವರು ಅಧಿಕೃತವಾಗಿ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಈ ಆರೋಪಗಳ ಬಗ್ಗೆ ನಟ ಕಿಚ್ಚ ಸುದೀಪ್ ಹಾಗೂ ಚಕ್ರವರ್ತಿ ಚಂದ್ರಚೂಡ ಅವರಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.

You cannot copy content of this page

Exit mobile version