ಬೆಂಗಳೂರಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ವ್ಯಕ್ತಿ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಬ್ಯಾಟರಾಯನಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ವ್ಯಕ್ತಿಯದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.
