Friday, April 18, 2025

ಸತ್ಯ | ನ್ಯಾಯ |ಧರ್ಮ

ಸುನಿತಾ ಕೇಜ್ರಿವಾಲ್‌ ಅವರಿಂದ ಪಕ್ಷದ ಪ್ರಚಾರ ಚುರುಕು: ರೋಡ್‌ ಶೋ ಸಾಧ್ಯತೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಚಾರಕ್ಕೆ ಚುರುಕು ಮೂಡಿಸುವುದಕ್ಕಾಗಿ ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನಿತಾ ಕೇಜ್ರಿವಾಲ್‌ ಅವರು ಈ ವಾರಾಂತ್ಯಕ್ಕೆ ರೋಡ್‌ ಶೋ ನಡೆಸಲು ತಯಾರಿ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಬಕಾರಿ ಹಗರಣ ಸಂಬಂಧ ಜೈಲಿನಲ್ಲಿರುವ ಕೇಜ್ರಿವಾಲ್ ಅನುಪಸ್ಥಿತಿ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರಿಂದ  ಪ್ರಚಾರಕ್ಕೆ ಹಿನ್ನಡೆಯಾಗಿದೆ. ಅರವಿಂದ ಕೇಜ್ರಿವಾಲ್‌ ಅವರ ಅನುಪಸ್ಥಿತಿಯಲ್ಲಿ ಮುಂದುವರೆಯಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಈ ಮೂಲಕ ತೆರೆಮರೆಯಲ್ಲೇ ದೊಡ್ಡ ಜವಾಬ್ಧಾರಿ ವಹಿಸಿಕೊಳ್ಳಲು ಸುನಿತಾ ಅಡಿ ಇಡುತ್ತಿದ್ದಾರೆ ಎನ್ನಲಾಗುತ್ತಿದೆ.

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಪರ ಕೊಂಡ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ವಾರಾಂತ್ಯ ಸುನಿತಾ ಅವರ ಮೊದಲ ರ್‍ಯಾಲಿ ನಿಗದಿಯಾಗಿದೆ. ದೆಹಲಿಯಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಿರುವ ಉಳಿದ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಸುನಿತಾ ರೋಡ್ ಶೋ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್ ಮತ್ತು ಪಂಜಾಬ್‌ ರಾಜ್ಯಗಳಲ್ಲೂ ಎಎಪಿ ಅಭ್ಯರ್ಥಿಗಳ ಪರ ಸುನಿತಾ ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಜರಾತ್‌ನ ಎಎಪಿ ಘಟಕದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಸುನಿತಾ ಹೆಸರಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಎಎಪಿ, ಪೂರ್ವ ದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ನವದೆಹಲಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page