ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಲಾಗಿದೆ. ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಿರುವ ಜಾಮೀನಿನ ಮೇಲೆ ರಾಜ್ಯ ಸರ್ಕಾರ ಪ್ರಶ್ನೆ ಮಾಡಿತ್ತು. ಈಗ ಈ ಜಾಮೀನು ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದಾಗಿದೆ.
ಇದರ ಜೊತೆಗೆ ನಟ ದರ್ಶನ್ ಪರ ವಕೀಲ ಕಪಿಲ್ ಸಿಬಲ್ ಕೋರ್ಟ್ ಗೆ ಹಾಜರಾಗಿರಲಿಲ್ಲ. ವಕೀಲ ಕಪಿಲ್ ಸಿಬಲ್ ವಿಚಾರಣೆ ಸಂಬಂಧ ಬೇರೊಂದು ಕೋರ್ಟ್‌ಗೆ ಹಾಜರಾದ ಸಂಬಂಧ ಇಂದು ವಾದ ಮಂಡಿಸಲು ಸಾಧ್ಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂದಿನ ಅಲಭ್ಯತೆ ಕಾರಣದಿಂದ ಒಂದು ದಿನ ಮುಂದೂಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು.
ಈ ಎಲ್ಲಾ ಬೆಳವಣಿಗೆಗಳ ಕಾರಣದಿಂದ ಕೋರ್ಟ್ ವಿಚಾರಣೆ ಗುರುವಾರಕ್ಕೆ ಮುಂದೂಡಿದೆ. ಕಳೆದ ಗುರುವಾರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿತ್ತು.