ದೆಹಲಿ: ಬಹುನೀರೀಕ್ಷೆಯ ಒಳ ಮೀಸಲಾತಿ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ. 6:1 ಬಹುಮತದೊಂದಿಗೆ ರಾಜ್ಯಗಳು ಒಳ ಮೀಸಲಾತಿ ನೀಡುವ ಹಕ್ಕನ್ನು ಹೊಂದಿವೆ ಎಂದು ತೀರ್ಪು ನೀಡಿದೆ.
ಉದ್ಯೋಗ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಜಾತಿವಾರು ಉಪವರ್ಗೀಕರಣ ಮಾಡಲು ರಾಜ್ಯಕ್ಕೆ ಅಧಿಕಾರವಿದೆ ಎಂದು ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟಿನ 7 ನ್ಯಾಯಾಧೀಶರ ಪೀಠವು 6:1 ಬಹುಮತದಿಂದ, ಮೀಸಲಾತಿ ವರ್ಗಗಳ ಅಂದರೆ ಪರಿಶಿಷ್ಟ ಜಾತಿಗಳು / ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣಕ್ಕೆ ಅನುಮತಿಸಿದೆ. ಇವಿ ಚಿನ್ನಯ್ಯ ತೀರ್ಪಿನಲ್ಲಿ ಕೆಲವು ನ್ಯೂನತೆಗಳಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.
ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ…