Home ದೇಶ ಸುಪ್ರೀಂಕೋರ್ಟ್‌ಗೆ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಸುಪ್ರೀಂಕೋರ್ಟ್‌ಗೆ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

0

ನಾಲ್ವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹಿರಿಯ ವಕೀಲರಾದ ವಿ. ಮೋಹನ್ ಅವರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಬುಧವಾರ ಕೊಲಿಜಿಯಂ ಶಿಫಾರಸು ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರ ನೇತೃತ್ವದಲ್ಲಿ ಮೇ 22 ಮತ್ತು ಮೇ 27 ರಂದು ಕೊಲಿಜಿಯಂ ಸಭೆಗಳು ನಡೆದಿವೆ ಎಂದು ಸುಪ್ರೀಂಕೋರ್ಟ್ ವೆಬ್‌ಸೈಟ್ ತನ್ನ ಇತ್ತೀಚಿನ ಪ್ರಕಟಣೆಯಲ್ಲಿ ತಿಳಿಸಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಶೀಲ್ ನಾಗು, ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಶ್ರೀ ಚಂದ್ರಶೇಖರ್, ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಸಚ್‌ದೇವ ಮತ್ತು ಜಮ್ಮು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಅರುಣ್ ಪಲ್ಲಿ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಕೊಲಿಜಿಯಂ ಶಿಫಾರಸು ಮಾಡಿದೆ.

ಪ್ರಸ್ತುತ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯಾಬಲ ಸಿಜೆಐ ಸೇರಿದಂತೆ 32 ಮುಂದಿನ ತಿಂಗಳು ಸುಪ್ರೀಂಕೋರ್ಟ್‌ನ ಇಬ್ಬರು ಹಾಲಿ ನ್ಯಾಯಮೂರ್ತಿಗಳು ನಿವೃತ್ತರಾಗಲಿದ್ದಾರೆ.

You cannot copy content of this page

Exit mobile version