Home ಇನ್ನಷ್ಟು ಕೋರ್ಟು - ಕಾನೂನು ಜಾಮೀನು ವಿಸ್ತರಣೆಯ ಮನವಿಯನ್ನು ತುರ್ತಾಗಿ ಮಾಡಲೊಪ್ಪದ ಸುಪ್ರೀಂ: ಕೇಜ್ರಿವಾಲ್ ಮತ್ತೆ ಜೈಲ್‌?

ಜಾಮೀನು ವಿಸ್ತರಣೆಯ ಮನವಿಯನ್ನು ತುರ್ತಾಗಿ ಮಾಡಲೊಪ್ಪದ ಸುಪ್ರೀಂ: ಕೇಜ್ರಿವಾಲ್ ಮತ್ತೆ ಜೈಲ್‌?

0

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರು ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆ ಮಾಡಲಾಗದು ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ಹೀಗಾಗಿ ಅವರು ಮತ್ತೆ ಜೈಲು ಪಾಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಅವರ ಜಾಮೀನು ಅವಧಿ ಜೂನ್‌ 2ರಂದು ಮುಗಿಯಲಿದೆ. ಸುಪ್ರೀಂ ಕೋರ್ಟ್‌ನ ಸೂಚನೆಯ ಪ್ರಕಾರ ಜೂನ್ 2ರಂದು ಜೈಲಿಗೆ ವಾಪಸ್ ಆಗಬೇಕಿದೆ. ಹೀಗಾಗಿ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸಬೇಕು ಎಂದು ಕೋರಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದ್ದರು. ಇಷ್ಟು ತುರ್ತಾಗಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಈ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕೋಟ್ ಹೇಳಿದೆ.

ಪಿಇಟಿ–ಸಿಟಿ ಪರೀಕ್ಷೆ ಸೇರಿದಂತೆ ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿರುವ ಕಾರಣಕ್ಕೆ ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಅವರು ಕೋರಿದ್ದರು.

ದೇಹದ ತೂಕವು ಇದ್ದಕ್ಕಿದ್ದಂತೆ ಕಡಿಮೆ ಆಗಿದೆ. ಕೀಟೊನ್ ಮಟ್ಟವು ಹೆಚ್ಚಾಗಿದೆ. ಇದು ಮೂತ್ರಕೋಶ, ಹೃದಯದ ಸಮಸ್ಯೆ ಅಥವಾ ಕ್ಯಾನ್ಸರ್‌ನ ಸೂಚಕಗಳಿರಬಹುದು. ಹೀಗಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು ಎಂದು ಅರ್ಜಿಯಲ್ಲಿ ಹೇಳಿದ್ದರು.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್‌ 21 ದಿನಗಳ ಮಧ್ಯಂತರ ಜಾಮೀನನ್ನು ಮೇ 10ರಂದು ಮಂಜೂರು ಮಾಡಿತ್ತು.

You cannot copy content of this page

Exit mobile version