ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 37 ಕ್ಕೆ ಏರಿಕೆ: ಕೇಂದ್ರ ಸರ್ಕಾರದಿಂದ ಹೊಸ ಸುಗ್ರೀವಾಜ್ಞೆ ಜಾರಿ

ಸುಪ್ರೀಂಕೋರ್ಟ್‌ನಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸಲು ಮಹತ್ವದ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.

ಅಧಿಕೃತ ಗಜೆಟ್‌ನಲ್ಲಿ ಪ್ರಕಟವಾಗಿರುವ ಅಧಿಸೂಚನೆಯ ಪ್ರಕಾರ, ಸುಪ್ರೀಂಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಸುಗ್ರೀವಾಜ್ಞೆ-2026 ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅಂಕಿತ ಹಾಕಿದ್ದಾರೆ. ಈ ಹೊಸ ಸುಗ್ರೀವಾಜ್ಞೆಯ ಅನ್ವಯ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಪ್ರಸ್ತುತ ಇರುವ 33 ರಿಂದ 37 ಕ್ಕೆ ಹೆಚ್ಚಿಸಲಾಗಿದೆ.

ಇದರೊಂದಿಗೆ ಸುಪ್ರೀಂಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ಕಾಯ್ದೆ 1956 ರ ಸೆಕ್ಷನ್ 2 ರಲ್ಲಿ ಇದ್ದ ‘ಮೂವತ್ತಮೂರು’ ಎಂಬ ಪದದ ಬದಲಿಗೆ ಇನ್ನು ಮುಂದೆ ‘ಮೂವತ್ತೇಳು’ ಎಂಬ ಪದವನ್ನು ಸೇರ್ಪಡೆಗೊಳಿಸಲಾಗುತ್ತದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು (CJI) ಹೊರತುಪಡಿಸಿ ಈ ನ್ಯಾಯಮೂರ್ತಿಗಳ ಸಂಖ್ಯೆ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು