ಬಿಹಾರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ದೊಡ್ಡ ಆಘಾತವನ್ನೇ ನೀಡಿದೆ. ಮೀಸಲಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ.
ಬಿಹಾರ ಸರ್ಕಾರವು ರಾಜ್ಯದಲ್ಲಿ ಮೀಸಲಾತಿ ಮಿತಿಯನ್ನು 50 ಪ್ರತಿಶತದಿಂದ 65 ಪ್ರತಿಶತಕ್ಕೆ ಹೆಚ್ಚಿಸಲು ಆದೇಶಿಸಿತ್ತು. ಬಿಹಾರ ಸರ್ಕಾರದ ಈ ಆದೇಶಕ್ಕೆ ಪಾಟ್ನಾ ಹೈಕೋರ್ಟ್ ತಡೆ ನೀಡಿತ್ತು. ಇದಾದ ನಂತರ ಬಿಹಾರ ಸರ್ಕಾರವು ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತು.
ಸುಪ್ರೀಂ ಕೋರ್ಟ್ ಕೂಡ ಬಿಹಾರ ಸರ್ಕಾರದ ಅರ್ಜಿಯನ್ನು ಸ್ವೀಕರಿಸಿತ್ತು. ಆದರೆ ಇಂದು ನಡೆದ ವಿಚಾರಣೆ ವೇಳೆ ಪಾಟ್ನಾ ಹೈಕೋರ್ಟ್‌ನ ಪ್ರಕರಣಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಾಲಯದ ಈ ನಿರ್ಧಾರ ನಿತೀಶ್ ಸರ್ಕಾರದ ಪಾಲಿಗೆ ಹಿನ್ನೆಡೆಯಾಗಿ ಪರಿಣಮಿಸುವ ಸಂಭವವಿದೆ.