ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ್ ಅವರು ಬೆಂಗಳೂರಿನ ಮುಸ್ಲಿಂ ಪ್ರಾಬಲ್ಯದ ಪ್ರದೇಶವನ್ನು ಪಾಕಿಸ್ತಾನ ಎಂದು ಬಣ್ಣಿಸಿದ ವಿಡಿಯೋ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಅದೇ ಸಮಯದಲ್ಲಿ, ಈಗ ಅವರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.
“ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳು ನೀಡಿದ ಹೇಳಿಕೆಗಳ ಕುರಿತಾದ ಮಾಧ್ಯಮ ವರದಿಗಳು ನಮ್ಮ ಗಮನಕ್ಕೆ ಬಂದಿವೆ. ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಂದ ಸೂಚನೆಗಳನ್ನು ಪಡೆದ ನಂತರ ವರದಿಯನ್ನು ಸಲ್ಲಿಸುವಂತೆ ನಾವು ಕರ್ನಾಟಕ ಹೈಕೋರ್ಟ್‌ಗೆ ವಿನಂತಿಸುತ್ತೇವೆ” ನ್ಯಾಯಮೂರ್ತಿ ಚಂದ್ರಚೂಡ್ ತಿಳಿಸಿದ್ದಾರೆ.
ಮುಂದಿನ ವಿಚಾರಣೆ ಸೆಪ್ಟೆಂಬರ್ 25ರಂದು ನಡೆಯಲಿದೆ
ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಂದ ಸೂಚನೆ ಪಡೆದ ನಂತರ ವರದಿಯನ್ನು ಸಲ್ಲಿಸುವಂತೆ ನಾವು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರನ್ನು ಕೋರುತ್ತೇವೆ ಎಂದು ಸಿಜೆಐ ಹೇಳಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು ಎರಡು ದಿನಗಳ ಕಾಲಾವಕಾಶ ನೀಡಿದ್ದಾರೆ.
ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು 5 ಮೇ 2020ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು. 25 ಸೆಪ್ಟೆಂಬರ್ 2021ರಂದು ಅವರು ಕರ್ನಾಟಕ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾದರು.
ಇದನ್ನೂ ಓದಿ: ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಸಿದ ನ್ಯಾಯಾಧೀಶರ ಇನ್ನೊಂದು ವಿಡಿಯೋ ವೈರಲ್, ನ್ಯಾಯಾಧೀಶರಿಗೆ ಲಿಂಗ ಸೂಕ್ಷ್ಮತೆ ಕಲಿಸಬೇಕಿದೆ ಎಂದ ಹಿರಿಯ ವಕೀಲೆ ಇಂದಿರಾ ಜೈಸಿಂಗ್
https://peepalmedia.com/indira-jaisng-angry-on-high-judge-statement/