Home ಇನ್ನಷ್ಟು ಕೋರ್ಟು - ಕಾನೂನು ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಮರುಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಮರುಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ

0

2020ರ ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಅವರು, ತಮ್ಮ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆಯನ್ನು ನಡೆಸಿತು. ಮರುಪರಿಶೀಲನಾ ಅರ್ಜಿ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಪೀಠವು, ಈ ಪ್ರಕರಣದಲ್ಲಿ ಯಾವುದೇ ಮರುಪರಿಶೀಲನೆಯ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.

ಜೊತೆಗೆ, ಅರ್ಜಿಯ ವಿಚಾರಣೆಯನ್ನು ತೆರೆದ ನ್ಯಾಯಾಲಯದಲ್ಲಿ (ಮೌಖಿಕ ವಿಚಾರಣೆ) ನಡೆಸಬೇಕೆಂಬ ಉಮರ್ ಖಾಲಿದ್ ಅವರ ಮನವಿಯನ್ನೂ ನ್ಯಾಯಪೀಠವು ತಿರಸ್ಕರಿಸಿದೆ.

You cannot copy content of this page

Exit mobile version