Home ಇನ್ನಷ್ಟು ಕೋರ್ಟು - ಕಾನೂನು ಸಿದ್ದಿಕ್ ಕಪ್ಪನ್: ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ ಕೋರ್ಟ್

ಸಿದ್ದಿಕ್ ಕಪ್ಪನ್: ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ ಕೋರ್ಟ್

0

ನವದೆಹಲಿ: ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ ಜಾಮೀನು ಷರತ್ತು ಸಡಿಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.

ನ್ಯಾಯಮೂರ್ತಿ ಪಿ.ಎಸ್. ನರಸಿಂಹ ನೇತೃತ್ವದ ಪೀಠವು ಸುಪ್ರೀಂ ಕೋರ್ಟ್‌ನ ಸೆಪ್ಟೆಂಬರ್ 2022ರ ಆದೇಶವನ್ನು ಮಾರ್ಪಡಿಸಿತು.

ಅರ್ಜಿದಾರರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವರದಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಪೀಠ ಹೇಳಿದೆ.

ತನ್ನ ವಿರುದ್ಧ ದಾಖಲಾಗಿರುವ ಉಪಪ್ರಕರಣದಲ್ಲಿ ಪ್ರತಿ ವಾರ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿದ್ದ ಜಾಮೀನು ಷರತ್ತನ್ನು ಸಡಿಲಿಸುವಂತೆ ಕೋರಿ ಸಿದ್ದಿಕ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅಕ್ಟೋಬರ್ 2020 ರಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ದಲಿತ ಮಹಿಳೆಯ ಸಾವನ್ನು ವರದಿ ಮಾಡಲು ಹೋಗುತ್ತಿದ್ದಾಗ ಕಪ್ಪನ್ ಅವರನ್ನು ಪೊಲೀಸರು ಬಂಧಿಸಿದ್ದರು.

“ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿದೆ” ಎಂದು ಹೇಳುವ ಮೂಲಕ 9 ಸೆಪ್ಟೆಂಬರ್ 2022ರಂದು ಕಪ್ಪನ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟಿತು. ಕಪ್ಪನ್ ಆಗಲೇ ಎರಡು ವರ್ಷಗಳಿಂದ ಬಂಧನದಲ್ಲಿದ್ದರು.

You cannot copy content of this page

Exit mobile version