ಸುಪ್ರೀಂ ಕೋರ್ಟಿನಲ್ಲಿರುವ ವ್ಯಾಜ್ಯಗಳ ಪರಿಹಾರಕ್ಕೆ ಸಮಾಧಾನ ಸಮಾರೋಹ್ ವಿಶೇಷ ಆಭಿಯಾನ

ಕಾರವಾರ:- ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‌ನ್ನು ಆಗಸ್ಟ್ 21, 22 ಮತ್ತು 23 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಹೇಳಿದರು.

ಅವರು ಗುರುವಾರ ಜಿಲ್ಲಾ ನ್ಯಾಯಾಲಯದ, ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ಮಾತನಾಡಿದರು.

ಸರ್ವೋಚ್ಚ ನ್ಯಾಯಾಲಯದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಂಬAದಿಸಿದAತೆ 34 ಪ್ರಕರಣಗಳಿದ್ದು, ಇವುಗಳಲ್ಲಿ 17 ಕೌಟುಂಬಿಕ, 9 ಸಿವಿಲ್, 2 ಮೋಟಾರು ವಾಹನ ಅಪಘಾತ ಪರಿಹಾರ, 1 ಭೂ ಸ್ವಾಧೀನ, 1 ಕಾರ್ಮಿಕ ವಿವಾದ, 1 ಚೆಕ್ ಅಮಾನ್ಯ, 2 ತೆರಿಗೆ ಹಾಗೂ 1 ಸರ್ವಿಸ್ ಗೆ ಸಂಬAಧಿಸಿದ ಪ್ರರಣಗಳನ್ನು ಗುರುತಿಸಲಾಗಿದ್ದು, ಈ ಪ್ರಕರಣಗಳನ್ನು ಆ. 21 ರಿಂದ ಆ.23ರ ವರೆಗೆ ನಡೆಯುವ ಸಮಾಧಾನ ಸಮಾರೋಹ್ ವಿಶೇಷ ಲೋಕ ಅದಾಲತ್ ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

ಜಿಲ್ಲೆಯ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ವಿಶೇಷÀ ಲೋಕ ಅದಾಲತ್ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಹಾಗೂ ಸಾರ್ವಜನಿಕರ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಈ ಅದಾಲತ್ ನಲ್ಲಿ ಸೇರಿಸಲು ಗೂಗಲ್ ಶಿಟ್ ಲಿಂಕ್ ಮೂಲಕ ಅಥವಾ ಹತ್ತಿರದ ತಾಲೂಕು ಮತ್ತು ಜಿಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೂಲಕ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸವೋಚ್ಚ ನ್ಯಾಯಾಲಯವು ಪ್ರಪ್ರಥಮ ಬಾರಿಗೆ ಸಮಾಧಾನ ಸಮಾರೋಹ್ ವಿಶೇಷ ಲೋಕ ಅದಾಲತ್ ದೇಶದಾದ್ಯಂತ ಆಯೋಜಿಸದ್ದು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಅದಾಲತ್ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಸುವರ್ಣಾವಕಾಶವಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದರು.

Related Articles

ಇತ್ತೀಚಿನ ಸುದ್ದಿಗಳು