ಹೊಸದಿಲ್ಲಿ: ರೈತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೃದ್ಧೆಯೊಬ್ಬರ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಪ್ರಕರಣದ ವಿಚಾರಣೆಯನ್ನು ವಿಚಾರಣಾ ನ್ಯಾಯಾಲಯದಲ್ಲೇ ಮುಂದುವರಿಸಲು ಸುಪ್ರೀಂ ಕೋರ್ಟ್ ಸೂಚಿಸಿದ್ದರಿಂದ ಕಂಗನಾ ತಮ್ಮ ಅರ್ಜಿಯನ್ನು ಹಿಂಪಡೆದರು. ಕಂಗನಾ ಕೇವಲ ವಿವಾದಾತ್ಮಕ ಟ್ವೀಟ್ ಅನ್ನು ‘ರಿಟ್ವೀಟ್’ ಮಾತ್ರ ಮಾಡಿದ್ದರು ಎಂದು ಅವರ ವಕೀಲರು ವಾದಿಸಿದರು.
ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಕಂಗನಾ ಅವರು ರಿಟ್ವೀಟ್ ಮಾಡುವ ಮೊದಲು ತಮ್ಮದೇ ಆದ ಅಭಿಪ್ರಾಯಗಳನ್ನು ಸೇರಿಸಿದ್ದಾರೆ” ಎಂದು ಹೇಳಿತು.